Advertisement

138 ಜನ ಗುಣಮುಖ-ಬಿಡುಗಡೆ; ಹೊಸದಾಗಿ 168 ಜನರಿಗೆ ಸೋಂಕು

03:40 PM Aug 16, 2020 | Suhan S |

ಬಾಗಲಕೋಟೆ: ಜಿಲ್ಲೆಯಲ್ಲಿ 138 ಜನ ಕೋವಿಡ್‌ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆಯಾಗಿದ್ದು, ಶನಿವಾರ ಹೊಸದಾಗಿ 168 ಜನರಿಗೆ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ| ಕೆ.ರಾಜೇಂದ್ರ ತಿಳಿಸಿದ್ದಾರೆ.

Advertisement

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 3994 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 2941 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕು 37, ಬಾದಾಮಿ 36, ಹುನಗುಂದ 29, ಬೀಳಗಿ 22, ಮುಧೋಳ 25, ಜಮಖಂಡಿ 19 ಜನ ಇದ್ದು, ಅವರನ್ನು ನಿಗದಿತ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯ 1642 ಸ್ಯಾಂಪಲ್‌ಗ‌ಳ ವರದಿ ಬರಬೇಕಿದೆ.  ಪ್ರತ್ಯೇಕವಾಗಿ 596 ಜನ ನಿಗಾದಲ್ಲಿದ್ದಾರೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 42,439 ಸ್ಯಾಂಪಲ್‌ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 36516 ನೆಗೆಟಿವ್‌, 3,994 ಪಾಸಿಟಿವ್‌ ಬಂದಿವೆ.

ಜಿಲ್ಲಾ ಕೋವಿಡ್‌ ಆಸ್ಪತ್ರೆ ಹಾಗೂ ಜಿಲ್ಲೆಯ ವಿವಿಧ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ 999 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಿಂದ ಕಳುಹಿಸಿದ್ದ ಒಟ್ಟು 192 ಸ್ಯಾಂಪಲ್‌ಗ‌ಳು ರಿಜೆಕ್ಟ್ ಆಗಿವೆ. ಜಿಲ್ಲೆಯಲ್ಲಿ ಕಂಟೇನ್ಮೆಂಟ್‌ ಝೋನ್‌ 223 ಇದ್ದು, ಇನ್‌ಸ್ಟಿಟ್ಯೂಶನ್‌ ಕ್ವಾರಂಟೈನ್‌ನಲ್ಲಿದ್ದ 8307 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next