Advertisement

140 ಜನ ಗುಣಮುಖ 139 ಜನರಿಗೆ ಸೋಂಕು

02:49 PM Aug 24, 2020 | Suhan S |

ಬಾಗಲಕೋಟೆ: ಜಿಲ್ಲೆಯಲ್ಲಿ 140 ಜನ ಕೋವಿಡ್‌ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ 139 ಕೊರೊನಾ ಪ್ರಕರಣಗಳು ರವಿವಾರ ದೃಢಪಟ್ಟಿವೆ ಎಂದು ಡಿಸಿ ಕ್ಯಾಪ್ಟನ್‌ ಡಾ| ಕೆ.ರಾಜೇಂದ್ರ ತಿಳಿಸಿದ್ದಾರೆ.

Advertisement

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 5199 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 4291 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕು 33, ಬಾದಾಮಿ 14, ಹುನಗುಂದ 29, ಬೀಳಗಿ 4, ಮುಧೋಳ 10, ಜಮಖಂಡಿ 44 ಹಾಗೂ ಬೇರೆ ಜಿಲ್ಲೆಯ ಐವರು ಇದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾ ಕೋವಿಡ್‌ ಲ್ಯಾಬ್‌ನಲ್ಲಿ ಪರಿಕ್ಷಿಸಲಾಗುತ್ತಿದ್ದ 1426 ಸ್ಯಾಂಪಲ್‌ಗ‌ಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ.ಪ್ರತ್ಯೇಕವಾಗಿ 514 ಜನ ನಿಗಾದಲ್ಲಿದ್ದಾರೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 49851 ಸ್ಯಾಂಪಲ್‌ಗ‌ಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 42921 ನೆಗೆಟಿವ್‌ ಪ್ರಕರಣ, 5199 ಪಾಸಿಟಿವ್‌ ಪ್ರಕರಣ ಹಾಗೂ 66 ಜನ ಮೃತಪಟ್ಟಿದ್ದಾರೆ. ಇನ್ನು 835 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿಯವರೆಗೆ ಒಟ್ಟು 210 ಸ್ಯಾಂಪಲ್‌ಗ‌ಳು ಮಾತ್ರ ರಿಜೆಕ್ಟ್ ಆಗಿರುತ್ತವೆ. ಕಂಟೇನ್ಮೆಂಟ್‌ ಝೋನ್‌ 585 ಇದ್ದು, ಇನ್‌ಸ್ಟಿಟ್ಯೂಶನ್‌ ಕ್ವಾರಂಟೈನ್‌ನಲ್ಲಿದ್ದ 8429 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಕೋವಿಡ್‌-19ಗೆ ನಾಲ್ವರು ಸಾವು: ಜಿಲ್ಲೆಯ ಬಾದಾಮಿ ನಗರದ ನಿವಾಸಿ 68 ವರ್ಷದ ವೃದ್ಧ ಆ. 20ರಂದು ಮೃತಪಟ್ಟಿದ್ದಾರೆ. ಇದೇ ನಗರದ ನಿವಾಸ 64 ವರ್ಷದ ಪುರುಷ ನ್ಯೂಮೋನಿಯಾ ಮತ್ತು ತೀವ್ರ ಉಸಿರಾಟದ ತೊಂದರೆಯಿಂದ ಶನಿವಾರ ಮೃತಪಟ್ಟಿದ್ದಾರೆ. ಬೀಳಗಿ ಪಟ್ಟಣದ ನಿವಾಸಿ 51 ವರ್ಷದ ಮಹಿಳೆ ಆ. 14ರಂದು ಖಾಸಗಿ ಕೋವಿಡ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದು,  ನ್ಯೂಮೋನಿಯಾ ಮತ್ತು ತೀವ್ರ ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದಾರೆ. ಬಾದಾಮಿಯ 77 ವರ್ಷದ ಪುರುಷ ಆ. 18ರಂದು ಖಾಸಗಿ ಕೋವಿಡ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಕೋವಿಡ್‌ ಮಾರ್ಗಸೂಚಿಗಳ ಪ್ರಕಾರ ಅಂತ್ಯಕ್ರಿಯೆ ಮಾಡಲಾಗಿದೆ. ಇವರ ಕುಟುಂಬದವರೊಡನೆ ನೇರ ಸಂಪರ್ಕ ಹೊಂದಿದವರು ಕೂಡಲೇ ಹತ್ತಿರದ ಸರಕಾರಿ ಆಸ್ಪತ್ರೆಯಲ್ಲಿ ಪರೀಕ್ಷಿಸಿಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next