Advertisement

ಆರು ಸಾವಿರ ಗಡಿ ದಾಟಿದ ಕೋವಿಡ್

03:43 PM Aug 31, 2020 | Suhan S |

ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ 6 ಸಾವಿರ ಗಡಿ ದಾಟಿದ್ದು, ರವಿವಾರ ಮತ್ತೆ 131 ಜನರಿಗೆ ಸೋಂಕು ದೃಢಪಟ್ಟಿದೆ.

Advertisement

ರವಿವಾರ 184 ಜನ ಕೋವಿಡ್‌ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ 132 ಜನರಿಗೆ ಸೋಂಕು ತಗುಲಿದೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 6042 ಜನರಿಗೆ ಕೋವಿಡ್‌ ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ 5175 ಜನ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ  ನೀಡಲಾಗುತ್ತಿದೆ. ಜಿಲ್ಲಾ ಕೋವಿಡ್‌ ಲ್ಯಾಬ್‌ನಲ್ಲಿ ಪರಿಕ್ಷಿಸಲಾಗುತ್ತಿದ್ದ 411ಸ್ಯಾಂಪಲ್‌ಗ‌ಳ ವರದಿ ಬರಬೇಕಿದೆ. ಸಧ್ಯ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ 289 ಜನ ನಿಗಾದಲ್ಲಿದ್ದಾರೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 58,972 ಸ್ಯಾಂಪಲ್‌ ಪರೀಕ್ಷೆಗೆ ಕಳುಹಿಸಿದ್ದು, ಅದಲ್ಲಿ 52,210 ಜನರಿಗೆ ನೆಗೆಟಿವ್‌, 6,042 ಜನರಿಗೆ ಪಾಸಿಟಿವ್‌ ಬಂದಿದೆ. ಕೊರೊನಾದಿಂದ 73 ಜನ ಮೃತಪಟ್ಟಿದ್ದಾರೆ. ಇನ್ನು 794 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇಲ್ಲಿವರೆಗೆ ಒಟ್ಟು 214 ಸ್ಯಾಂಪಲ್‌ ರಿಜೆಕ್ಟ್ ಆಗಿವೆ. ಜಿಲ್ಲೆಯಲ್ಲಿ ಕಂಟೇನ್ಮೆಂಟ್‌ ಝೋನ್‌ 585 ಇದ್ದು, ಇನ್ಸ್ಟಿಟ್ಯೂಶನ್‌ ಕ್ವಾರಂಟೈನ್‌ ನಲ್ಲಿದ್ದ 8658 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ|ಕೆ.ರಾಜೇಂದ್ರ ತಿಳಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರಿಗೆ ಕೋವಿಡ್‌ ಟೆಸ್ಟ್‌ : ಮಹಾಲಿಂಗಪುರ: ರವಿವಾರ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಮಳಲಿ, ಬೆಳಗಲಿ, ಸೈದಾಪುರ, ಕೆಸರಗೊಪ್ಪ ಭಾಗದ ಸುಮಾರು 114 ಜನ ಅಂಗನವಾಡಿ ಕಾರ್ಯಕರ್ತೆಯರಿಗೆ ರ್ಯಾಪಿಡ್‌ ಮೂಲಕ ಕೋವಿಡ್‌ ಟೆಸ್ಟ್‌ ಮಾಡಲಾಯಿತು.

ಮುಗಳಖೋಡ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸೈದಾಪುರ ಗ್ರಾಮದ ಅಂಗನವಾಡಿ ಕಾರ್ಯಕರ್ತೆಗೆ ಕೋವಿಡ್‌ಪಾಸಿಟಿವ್‌ ದೃಢಪಟ್ಟಿದೆ. ಸಮೀರವಾಡಿಯಲ್ಲಿ ಮೂರು ಪ್ರಕರಣ ಸೇರಿ ರವಿವಾರ ಒಟ್ಟು 4 ಕೋವಿಡ್‌ ಪಾಸಿಟಿವ್‌ ದೃಢಪಟ್ಟಿವೆ. ಈ ಮೂಲಕ ಸೈದಾಪುರ-ಸಮೀರವಾಡಿಯಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ 189ಕ್ಕೆ ಏರಿಕೆಯಾಗಿದೆ. ಮುಗಳಖೋಡ

ಗ್ರಾಮದ ಕೋವಿಡ್‌ ಸೋಂಕಿತೆ ಮುಧೋಳ ಕೋವಿಡ್‌ ಕೇರ್‌ನಲ್ಲಿ, ಸೈದಾಪುರ-ಸಮೀರವಾಡಿ ಕೋವಿಡ್‌ ಸೋಂಕಿತರನ್ನು ರಬಕವಿ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮದಭಾವಿಯಲ್ಲಿ ಒಂದು ಸೋಂಕು ದೃಢ: ಮದಭಾವಿ ಗ್ರಾಮದಲ್ಲಿ ಒಂದು ಕೋವಿಡ್‌ ಪಾಜಿಟೀವ್‌ ಕೇಸ್‌ ದೃಢಪಟ್ಟಿದೆ. ಮದಭಾವಿ ಗ್ರಾಮದ ಸುಮಾರು 40 ವರ್ಷದ ಪುರುಷನಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮದಭಾವಿಯಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ 2ಕ್ಕೇರಿಕೆಯಾಗಿದೆ. ರವಿವಾರ ಮಹಾಲಿಂಗಪುರ ಪಟ್ಟಣದಲ್ಲಿ ಕೋವಿಡ್ ಪ್ರಕರಣಗಳು ದಾಖಲಾಗಿಲ್ಲ

Advertisement
Advertisement

Udayavani is now on Telegram. Click here to join our channel and stay updated with the latest news.

Next