Advertisement
ಸಾವಿನ ಪ್ರಮಾಣ ಶೇ.1.47 ರಷ್ಟಿದೆ. ಕಳೆದ ಹದಿನೇಳು ದಿನದಲ್ಲಿ ಒಟ್ಟು 50 ಸಾವಿರ ಹೊಸ ಕೋವಿಡ್ ಸೋಂಕು ದೃಢಪಟ್ಟಿದೆ. ಹಾಗೆಯೇ ಹೊಸದಾಗಿ 2,935 ಕೋವಿಡ್-19 ಸೋಂಕಿತರು ಬಿಡುಗಡೆ ಆಗಿದ್ದು ಈ ಮೂಲಕ ಕೊರೊನಾ ಸೋಂಕಿನಿಂದ ವಿವಿಧ ಆಸ್ಪತ್ರೆಗಳಿಂದ ಚೇತರಿಸಿಕೊಂಡು ಬಿಡುಗಡೆ ಆಗುತ್ತಿರುವವ ಸಂಖ್ಯೆ 1,08,642ಕ್ಕೆ ಏರಿದೆ.
Related Articles
Advertisement
………………………………………………………………………………………………………………………………………………………
ಕೋವಿಡ್ ಕೇರ್ ಸಿಬ್ಬಂದಿಯಿಂದ ಧರಣಿ : ಬೆಂಗಳೂರು: ಕನಕಪುರ ರಸ್ತೆಯ ರವಿಶಂಕರ್ ಗುರೂಜಿ ಆಶ್ರಮದಲ್ಲಿ ಬಿಬಿಎಂಪಿ ನಡೆಸುತ್ತಿರುವ ಕೊವಿಡ್ ಆರೈಕೆ ಕೇಂದ್ರದಲ್ಲಿನ ಸಿಬ್ಬಂದಿಗೆ ವೇತನ ನೀಡಿಲ್ಲ ಎಂದು ಆರೋಪಿಸಿ ಇಲ್ಲಿನ ಸಿಬ್ಬಂದಿ ಬಿಬಿಎಂಪಿ ವಿರುದ್ಧ ಸೋಮವಾರ ಪ್ರತಿಭಟನೆ ನಡೆಸಿದರು.
ನಗರದಲ್ಲಿ ಕೊರೊನಾ ಸೌಮ್ಯ ಲಕ್ಷಣ ಇರುವವರ ಆರೈಕೆಗೆ ಕನಕಪುರ ರಸ್ತೆಯಲ್ಲಿರುವ ರವಿಶಂಕರ್ ಗುರೂಜಿ ಆಶ್ರಮದಲ್ಲಿ ಬಿಬಿಎಂಪಿ ವತಿಯಿಂದ ಕೋವಿಡ್ ಆರೈಕೆ ಕೇಂದ್ರವನ್ನು ಪ್ರಾರಂಭಿಸಲಾಗಿದ್ದು, 140 ಮಂದಿ ಕೋವಿಡ್ ಸೋಂಕಿತರಿಗೆ ಆರೈಕೆ ನೀಡಲಾಗುತ್ತಿದೆ. ಇದೀಗ ಇಲ್ಲಿನ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿರುವುದರಿಂದ ಕೋವಿಡ್ ಆರೈಕೆ ಕೇಂದ್ರದಲ್ಲಿ ಆರೈಕೆಗೆ ದಾಖಲಾಗಿರುವ ಸೋಂಕಿತರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಪಾಲಿಕೆಯು ನಗರದಲ್ಲಿ ಕೋವಿಡ್ ಸೋಂಕು ದೃಢಪಟ್ಟು ಸೌಮ್ಯ ಲಕ್ಷಣ ಸೋಂಕಿತರಿಗೆ ಕೋವಿಡ್ ಆರೈಕೆ ಕೇಂದ್ರದಲ್ಲಿ ಆರೈಕೆ ನೀಡುತ್ತಿದೆ. ವಿವಿಧ ಕೋವಿಡ್ ಆರೈಕೆ ಕೇಂದ್ರದ ವ್ಯವಸ್ಥೆಯ ಬಗ್ಗೆ ಮೊದಲಿನಿಂದಲೂ ದೂರುಗಳು ಕೇಳಿಬರುತ್ತಲೇ ಇವೆ. ಈ ಮಧ್ಯೆ ಕೆಲವು ಕೋವಿಡ್ ಕೇರ್ ಸೆಂಟರ್ ನಿರ್ವಹಣೆಗೆ ವೇತನ ನೀಡಿಲ್ಲ ಎಂದು ಸಿಬ್ಬಂದಿ ಹಾಗೂ ಗುತ್ತಿಗೆದಾರರು ಪ್ರತಿಭಟನೆ ನಡೆಸುತ್ತಿದ್ದಾರೆ.