ಚಾಮರಾಜ ನಗರ: ಜಿಲ್ಲೆಯಲ್ಲಿ ಸೋಮವಾರ 57 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇದೇ ವೇಳೆ 60 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಇಬ್ಬರು ಮೃತಪಟ್ಟಿದ್ದಾರೆ.
ಚಾಮರಾಜನಗರ ತಾಲೂಕಿನ ಸಂತೆಮರಹಳ್ಳಿ ಗ್ರಾಮದ 65 ವರ್ಷದ ವೃದ್ಧರು ಸೆ. 20ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿ, ಅದೇ ದಿನ ಮೃತಪಟ್ಟಿದ್ದಾರೆ. ಚಾಮರಾಜನಗರ ತಾಲೂಕು ಕವಮರವಾಡಿಯ 52 ವರ್ಷದ ವ್ಯಕ್ತಿ ಸೆ. 18ರಂದು ಕ್ಯಾನ್ಸರ್ ನಿಂದ ಬಳಲುತ್ತಿದ್ದು ಸೆ. 19ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ನಿಧನದ ನಂತರ ಕೋವಿಡ್ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಗುಂಡ್ಲುಪೇಟೆ ತಾಲೂಕಿನಲ್ಲಿ 10, ಚಾಮರಾಜನಗರ ತಾಲೂಕಿನಲ್ಲಿ 33, ಕೊಳ್ಳೇಗಾಲ ತಾಲೂಕಿನಲ್ಲಿ 02, ಯಳಂದೂರು ತಾಲೂಕಿನಲ್ಲಿ 08 ಹಾಗೂ ಹನೂರು ತಾಲೂಕಿನಲ್ಲಿ 04 ಪ್ರಕರಣಗಳು ವರದಿಯಾಗಿವೆ.
ಸೋಮವಾರ 365 ಮಾದರಿಗಳನ್ನಷ್ಟೇ ಪರೀಕ್ಷಿಸಲಾಗಿದೆ. ಇಷ್ಟು ಕಡಿಮೆ ಸಂಖ್ಯೆಯ ಮಾದರಿಗಳಲ್ಲೇ 57 ಪ್ರಕರಣಗಳು ದೃಢಪಟ್ಟಿವೆ. ಜಿಲ್ಲೆಯಲ್ಲಿ ಒಟ್ಟು 3541 ಪ್ರಕರಣಗಳು ದೃಢಪಟ್ಟಿವೆ. ಇವರಲ್ಲಿ 2850 ಮಂದಿ ಗುಣಮುಖರಾಗಿದ್ದಾರೆ. 614 ಸಕ್ರಿಯ ಪ್ರಕರಣಗಳಿವೆ. ಇದುವರೆಗೆ ಒಟ್ಟು 78 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 34 ಮಂದಿ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 256 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ.
ಇಂದಿನ ಪ್ರಕರಣಗಳು-57
ಇಂದು ಗುಣಮುಖ-60
ಒಟ್ಟು ಗುಣಮುಖ-2850
ಇಂದಿನ ಸಾವು-02
ಒಟ್ಟು ಸಾವು-78
ಸಕ್ರಿಯ ಪ್ರಕರಣಗಳು-614
ಒಟ್ಟು ಸೋಂಕಿತರು-3541