ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೋವಿಡ್ 2ನೇ ಅಲೆ ತೀವ್ರತೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣ ಹೆಚ್ಚಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಸೂಚನೆ ನೀಡಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಜಿಲ್ಲೆಯ ಎಲ್ಲಾ ನಗರಸಭೆ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬೆಂಗಳೂರಿನಲ್ಲಿ ದಿನೇ ದಿನೆ ಕೋವಿಡ್ ಪಾಸಿಟಿವ್ ಪ್ರಕರಣ ಹೆಚ್ಚಾಗುತ್ತಿವೆ. ಚಿಕ್ಕಬಳ್ಳಾಪುರಕ್ಕೆ ಬೆಂಗಳೂರು ತುಂಬಾ ಹತ್ತಿರ ಇರುವುದರಿಂದ ಪ್ರತಿ ನಿತ್ಯಸಾವಿರಾರು ಜನ ಓಡಾಡುವುದರಿಂದ ಹೆಚ್ಚಿನ ಪ್ರಕರಣ ಆಗುವ ಸಾಧ್ಯತೆ ಇದೆ. ನಗರಸಭೆ ವ್ಯಾಪ್ತಿಯ ಪ್ರತಿ ವಾರ್ಡ್ ನಲ್ಲೂ ಕೊರೊನಾ ಟಾಸ್ಕ್ ಫೋರ್ಸ್‌ಸಮಿತಿಗಳನ್ನು ಸಕ್ರಿಯಗೊಳಿಸಬೇಕು ಎಂದರು.
ಚಿಂತಾಮಣಿ ಹಾಗೂ ಚಿಕ್ಕಬಳ್ಳಾಪುರದಲ್ಲಿ ಹೆಚ್ಚಿನ ಜನಸಂಖ್ಯೆ ಇರುವುದರಿಂದ ಪ್ರಕರಣ ಹೆಚ್ಚಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ನಿಯಂತ್ರಣಸಂಬಂಧ ಸರ್ಕಾರದ ಮಾರ್ಗಸೂಚಿ ಪಾಲಿಸಬೇಕು. ಮಾಸ್ಕ್ ಹಾಕದವರಿಗೆ ಮುಲಾಜಿಲ್ಲದೇ ದಂಡ ವಿಧಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲೆಯ ಎಲ್ಲಾ ನಗರಗಳಲ್ಲಿ ಶೇ.100 ಸ್ವಚ್ಛತೆ ಹಾಗೂ ಕಸ ವಿಂಗಡಣೆ ಮಾಡಬೇಕು ಪ್ಲಾಸ್ಟಿಕ್‌ನಿಯಂತ್ರಣ ಮಾಡಬೇಕು. ಜನರಿಗೆ ಎಲ್ಲೆಂದರಲ್ಲಿ ಕಸಹಾಕದಂತೆ ತಿಳಿವಳಿಕೆ ನೀಡಬೇಕು. ಅದಕ್ಕೂಕೇಳದಿದ್ದರೆ ದಂಡ ವಿಧಿಸಬೇಕು ಎಂದರು.ಸಭೆಯಲ್ಲಿ ನಗರಸಭೆ ಪೌರಾಯುಕ್ತರಾದಲೋಹಿತ್ ಕುಮಾರ್, ಜಿಲ್ಲೆಯ ಎಲ್ಲಾ ನಗರಸಭೆ ಆಯುಕ್ತರು, ಅಧಿಕಾರಿಗಳು ಉಪಸ್ಥಿತರಿದ್ದರು.