Advertisement

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 128 ಮಂದಿಗೆ ಕೋವಿಡ್ ಸೋಂಕು ದೃಢ

09:44 PM Oct 04, 2020 | Suhan S |

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹೆಚ್ಚಾಗುತ್ತಿದ್ದು ರವಿವಾರ ಮತ್ತೆ 128 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

Advertisement

ಚಿಕ್ಕಬಳ್ಳಾಪುರ ತಾಲೂಕಿನಲ್ಲಿ 56 ಮಂದಿ ಸೇರಿದಂತೆ ಜಿಲ್ಲಾದ್ಯಂತ ರವಿವಾರ ಒಟ್ಟು 128 ಮಂದಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 7968 ಕ್ಕೇರಿದೆ.

ರವಿವಾರ ಕಾಣಿಸಿಕೊಂಡ ಹೊಸ ಪ್ರಕರಣಗಳಲ್ಲಿ ಚಿಕ್ಕಬಳ್ಳಾಪುರ 56, ಬಾಗೇಪಲ್ಲಿ 7, ಚಿಂತಾಮಣಿ 15, ಗೌರಿಬಿದನೂರು 16, ಗುಡಿಬಂಡೆ 12 ಹಾಗೂ ಶಿಡ್ಲಘಟ್ಟ ತಾಲೂಕಿನಲ್ಲಿ 22 ಮಂದಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 63 ಮಂದಿ ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 5929 ಜನರು ಡಿಸ್ಚಾರ್ಜ್ ಆಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next