Advertisement

ದಾಂಡೇಲಿಯಲ್ಲಿ 2 ಕೊರೊನಾ ಸೋಂಕಿತ ಪ್ರಕರಣಗಳು ದೃಢ

12:38 PM Dec 28, 2021 | Team Udayavani |

ದಾಂಡೇಲಿ: ನಗರದಲ್ಲಿ ಇಂದು 8 ವರ್ಷದ ಮತ್ತು 13 ವರ್ಷದ ವಯಸ್ಸಿನ ಇಬ್ಬರು ಬಾಲಕಿಯರಲ್ಲಿ ಕೊರೊನಾ ಸೋಂಕು ದೃಢವಾಗಿದೆ. ಇದೀಗ ಒಟ್ಟು 22 ಸೋಂಕಿತ ಪ್ರಕರಣಗಳು ಚಾಲ್ತಿಯಲ್ಲಿದೆ. 22 ಸೋಂಕಿತ ಪ್ರಕರಣಗಳಲ್ಲಿ ಇಬ್ಬರು ಬಾಲಕರು ಮತ್ತು ನಾಲ್ವರು ಬಾಲಕಿಯರು ಸೇರಿದ್ದಾರೆ. ಸೋಂಕಿತರಲ್ಲಿ ಹೆಚ್ಚಿನವರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರೇ, ಕೆಲವರು ಹೋಂ ಕ್ವಾರೆಂಟೈನಿನಲ್ಲಿದ್ದಾರೆ ಎಂದು ತಹಶೀಲ್ದಾರ್ ಶೈಲೇಶ ಪರಮಾನಂದ ಅವರು ತಿಳಿಸಿದ್ದಾರೆ.

Advertisement

ಕೋವಿಡ್ ಮುನ್ನೆಚ್ಚರಿಕೆಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಶೈಲೇಶ ಪರಮಾನಂದ ಅವರು ಕರೆ ನೀಡಿದ್ದಾರೆ. ಕೋವಿಡ್ ಎರಡನೇ ಅಲೆಯಲ್ಲಿ ನಗರದಲ್ಲಿ ಸಾಕಷ್ಟು ಸಾವು ನೋವುಗಳು ಸಂಭವಿಸಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next