Advertisement

ಹಾವೇರಿ: 224 ಕೋವಿಡ್ ಪ್ರಕರಣಗಳ ಪತ್ತೆ; ಮೂರು ಸಾವಿರ ದಾಟಿದ ಪ್ರಕರಣಗಳ ಸಂಖ್ಯೆ

07:08 PM Aug 21, 2020 | mahesh |

ಹಾವೇರಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ನಾಗಾಲೋಟ ಮುಂದುವರೆದಿದ್ದು ಶುಕ್ರವಾರ (ಆಗಸ್ಟ್ 21) ಒಂದೇ ದಿನ ಎರಡನೂರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗುವ ಮೂಲಕ ಜಿಲ್ಲೆಯಲ್ಲಿ ಪ್ರಕರಣಗಳ ಸಂಖ್ಯೆ ಮೂರು ಸಾವಿರ ಗಡಿ ದಾಟಿದೆ.

Advertisement

ಶುಶ್ರೂಷಕಿ, ಅಂಗನವಾಡಿ ಕಾರ್ಯಕರ್ತೆ, ವಕೀಲರು, ಪೊಲೀಸ್, ಅರಣ್ಯ, ಆರೋಗ್ಯ ಇಲಾಖೆ ಸಿಬ್ಬಂದಿ ಸೇರಿದಂತೆ 224 ಜನರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3107 ಕ್ಕೆ ಏರಿಕೆಯಾಗಿದೆ.

ಇಂದು ನಾಲ್ವರು ಕೋವಿಡ್ 19 ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಒಟ್ಟು 70 ಜನರು ಬಲಿಯಾದಂತಾಗಿದೆ. ಇಂದು ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 100 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ 19 ಪ್ರಕರಣದಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 1886 ಆಗಿದೆ. ಇನ್ನೂ ಒಟ್ಟು 1051 ಸಕ್ರಿಯ ಕೋವಿಡ್ 19 ಪ್ರಕರಣಗಳು ಜಿಲ್ಲೆಯಲ್ಲಿವೆ.

Advertisement

Udayavani is now on Telegram. Click here to join our channel and stay updated with the latest news.

Next