Advertisement

ಹಾವೇರಿ: ಶುಕ್ರವಾರ 264 ಕೋವಿಡ್ ಸೋಂಕು ದೃಢ; 88 ಜನರು ಗುಣಮುಖ

08:50 PM Sep 11, 2020 | mahesh |

ಹಾವೇರಿ: ಜಿಲ್ಲೆಯಲ್ಲಿ ಶುಕ್ರವಾರ 264 ಜನರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6360ಕ್ಕೆ ಏರಿಕೆಯಾಗಿದೆ.

Advertisement

ಇಬ್ಬರು ಕೋವಿಡ್ 19 ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಒಟ್ಟು 128 ಜನರು ಬಲಿಯಾದಂತಾಗಿದೆ. ಇಂದು ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 88 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ 19 ಪ್ರಕರಣದಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4747 ಆಗಿದೆ. ಇನ್ನೂ ಒಟ್ಟು 1455 ಸಕ್ರಿಯ ಕೋವಿಡ್ 19 ಪ್ರಕರಣಗಳು ಜಿಲ್ಲೆಯಲ್ಲಿವೆ.

Advertisement

Udayavani is now on Telegram. Click here to join our channel and stay updated with the latest news.

Next