Advertisement

ರಾಜ್ಯಾದ್ಯಂತ 200ರ ಗಡಿ ಸಮೀಪಿಸಿದ ಸೋಂಕಿತರ ಸಂಖ್ಯೆ: ಇಂದು 191ಮಂದಿಗೆ ಸೋಂಕು ದೃಢ

08:13 PM May 05, 2022 | Team Udayavani |

ಬೆಂಗಳೂರು: ರಾಜ್ಯದಲ್ಲಿ ಎರಡು ತಿಂಗಳ ಬಳಿಕ ಕೊರೊನಾ ಪಾಸಿಟಿವ್‌ ಸಂಖ್ಯೆ 200 ಗಡಿ ಸಮೀಪಿಸಿದ್ದು, ಗುರುವಾರ ರಾಜ್ಯಾದ್ಯಂತ ಒಟ್ಟು 191ಮಂದಿಗೆ ಸೋಂಕು ದೃಢವಾಗಿದೆ.

Advertisement

ರಾಜ್ಯಾದ್ಯಂತ 11,830 ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಪಾಸಿಟಿವಿಟಿ ದರ ಶೇ.1.61 ಹಾಗೂ ವಾರದ ಸೋಂಕಿನ ದರ ಶೇ.1.44 ಇದೆ.

ಬೆಂಗಳೂರು ನಗರದಲ್ಲಿ 171, ಮೈಸೂರು 14, ದ.ಕ.2, ತುಮಕೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ ಜಿಲ್ಲೆಯಲ್ಲಿ ತಲಾ ಒಂದು ಪಾಸಿಟಿವ್‌ ವರದಿಯಾಗಿದೆ. ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಬೀದರ್‌, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಧಾರವಾಡ, ಗದಗ, ಹಾಸನ, ಹಾವೇರಿ, ಕಲಬುರಗಿ, ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ, ರಾಯಚೂರು, ರಾಮನಗರ, ಶಿವಮೊಗ್ಗ, ಉಡುಪಿ ಜಿಲ್ಲೆಯಲ್ಲಿ ಶೂನ್ಯ ಕೋವಿಡ್‌ ಪಾಸಿಟಿವ್‌ ಪ್ರಕರಣ ವರದಿಯಾಗಿದೆ. 1854 ಸಕ್ರಿಯ ಪ್ರಕರಣಗಳಿವೆ.

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next