ಬೆಂಗಳೂರು: ಶುಕ್ರವಾರ ಸಾಯಂಕಾಲದಿಂದ ಶನಿವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 8818 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.
ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 6629 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 114 ಸೋಂಕಿತರು ಮೃತಪಟ್ಟಿದ್ದಾರೆ.
ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 2ಲಕ್ಷದ ಗಡಿ ದಾಟಿದ್ದು, ನಮ್ಮಲ್ಲಿ ಒಟ್ಟು219926 ಸೋಂಕು ಪ್ರಕರಣಗಳು ದಾಖಲಾಗಿವೆ. ಈ ನಡುವೆ ಸೋಂಕಿತರ ಚೇತರಿಕೆ ಸಂಖ್ಯೆಯೂ ಲಕ್ಷದ ಗಡಿಯನ್ನು ದಾಟಿರುವುದು ಆಶಾದಾಯಕ ವಿಷಯವಾಗಿದೆ. 134811 ಸೊಂಕಿತರು ಇದೀಗ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಇದೀಗ ಒಟ್ಟು 81276 ಸಕ್ರಿಯ ಕೋವಿಡ್ 19 ಸೋಂಕು ಪ್ರಕರಣಗಳಿವೆ.
ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ 3831 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 08 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 716 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 3495 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಆ ಬಳಿಕದ ಸ್ಥಾನಗಳಲ್ಲಿ ಬಳ್ಳಾರಿ (759), ಮೈಸೂರು (635), ಬೆಳಗಾವಿ (358), ದಾವಣಗೆರೆ (327), ದಕ್ಷಿಣ ಕನ್ನಡ (271), ಉಡುಪಿ (241), ಧಾರವಾಡ (239), ವಿಜಯಪುರ (232), ಕಲಬುರಗಿ (189), ಕೊಪ್ಪಳ (178), ಬಾಗಲಕೋಟೆ (168), ತುಮಕೂರು (161), ರಾಯಚೂರು (155), ಹಾಸನ (154), ಬೆಂಗಳೂರು ಗ್ರಾಮಾಂತರ (152), ಗದಗ (142), ಶಿವಮೊಗ್ಗ (133), ಹಾವೇರಿ (116), ಬೀದರ್ (113), ಇನ್ನುಳಿದಂತೆ, ಮಂಡ್ಯ (84), ಚಿಕ್ಕಮಗಳೂರು (79), ಉತ್ತರ ಕನ್ನಡ (75), ಯಾದಗಿರಿ (64), ಚಾಮರಾಜನಗರ (64), ಕೋಲಾರ (55), ರಾಮನಗರ (53), ಕೊಡಗು (48), ಚಿಕ್ಕಬಳ್ಳಾಪುರ (44) , ಮತ್ತು ಚಿತ್ರದುರ್ಗ (37), ಸೇರಿದಂತೆ ರಾಜ್ಯದ ಒಟ್ಟು 30 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.
ಇಂದು ರಾಜ್ಯದಲ್ಲಿ ಒಟ್ಟು 27,731 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ ಹಾಗೂ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ 29075 ಸೋಂಕು ಪತ್ತೆ ಪರೀಕ್ಷೆಗಳನ್ನು ಈ ಅವಧಿಯಲ್ಲಿ ನಡೆಸಲಾಗಿದೆ. ಈ ಮೂಲಕ ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು 54806 ಸೋಂಕು ಪತ್ತೆ ಪರಿಕ್ಷೆಗಳನ್ನು ನಡೆಸಲಾಗಿದೆ.
ರಾಜ್ಯದಲ್ಲಿ ಇದುವರೆಗೆ ಒಟ್ಟು 4,90,017 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ. ಇದನ್ನು ಹೊರತಾಗಿಸಿ ರಾಜ್ಯಾದ್ಯಂತ 15,03,743 ಜನರಿಗೆ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ. ಈ ಎಲ್ಲಾ ವಿಧಾನಗಳ ಮೂಲಕ ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 1993760 ಜನರಿಗೆ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ.