ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ದೈನಂದಿನ ಪ್ರಕರಣ ಮತ್ತೆ ಏರಿಕೆಯಾಗುತ್ತಿದೆ. ಶನಿವಾರ ಜಿಲ್ಲೆಯ 365 ಮಂದಿಗೆ ಕೊರೊನಾ ದೃಢಪಟ್ಟಿದ್ದು, ಏಳು ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ಹೊರತುಪಡಿಸಿ ದ.ಕ.ದಲ್ಲಿಯೇ ಅತೀ ಹೆಚ್ಚು ಪ್ರಕರಣ ದಾಖಲಾಗಿದೆ. ಮೃತಪಟ್ಟವರಲ್ಲಿ ಐವರು ಮಂಗಳೂರು, ಒಬ್ಬರು ಪುತ್ತೂರು ತಾಲೂಕು ಮತ್ತು ಒಬ್ಬರು ಹೊರ ಜಿಲ್ಲೆಯವರು. 243 ಮಂದಿ ಗುಣಮುಖರಾಗಿದ್ದಾರೆ. 2803 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಉಡುಪಿ: 148 ಪಾಸಿಟಿವ್ ಪತ್ತೆ
ಉಡುಪಿ: ಜಿಲ್ಲೆಯಲ್ಲಿ ಶನಿವಾರ 148 ಮಂದಿಗೆ ಸೋಂಕು ದೃಢಪಟ್ಟಿದ್ದು, ಓರ್ವ ವ್ಯಕ್ತಿ ಮೃಪಟ್ಟಿದ್ದಾರೆ. 88 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 1,105 ಸಕ್ರಿಯ ಪ್ರಕರಣಗಳಿವೆ.
ಕಾಸರಗೋಡು: 715 ಪಾಸಿಟಿವ್, 5 ಸಾವು
ಕಾಸರಗೋಡು: ಜಿಲ್ಲೆಯಲ್ಲಿ ಶನಿವಾರ 715 ಮಂದಿಗೆ ಸೋಂಕು ದೃಢಪಟ್ಟಿದೆ. 803 ಮಂದಿ ಗುಣಮುಖರಾಗಿದ್ದಾರೆ. ಐವರು ಮೃತಪಟ್ಟಿದ್ದಾರೆ. ಪ್ರಸ್ತುತ 6,927 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಾಸಿಟಿವಿಟಿ ದರ ಶೇ. 10.7
ಕೊಡಗು: 82 ಪಾಸಿಟಿವ್, 1 ಸಾವು
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶನಿವಾರ 82 ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಒಬ್ಬರು ಮೃತಪಟ್ಟಿದ್ದಾರೆ. ಪಾಸಿಟಿವಿಟಿ ದರ ಶೇ. 3.24ಕ್ಕೆ ಏರಿದೆ. 95 ಮಂದಿ ಗುಣಮುಖರಾಗಿದ್ದಾರೆ. 455 ಸಕ್ರಿಯ ಪ್ರಕರಣಗಳಿವೆ.