ಮೈಸೂರು: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ತೀವ್ರತೆ ಸ್ವಲ್ಪ ಮಟ್ಟಿಗೆ ತಗ್ಗಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 3,985ಕ್ಕೆ ಇಳಿಕೆಯಾಗಿದೆ.
ಪ್ರತಿದಿನ ಗುಣಮುಖರಾಗುತ್ತಿರುವರರ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಕಳೆದ 14 ದಿನಗಳ ಹಿಂದೆ7 ಸಾವಿರದವರೆಗೆಹೆಚ್ಚಾಗಿದ್ದ ಸಕ್ರಿಯ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಾ ಸಾಗಿರುವುದು ಜಿಲ್ಲೆಯ ಜನತೆಯಲ್ಲಿ ತುಸು ನೆಮ್ಮದಿ ತರಿಸಿದೆ.
ಮಂಗಳವಾರ 443ಹೊಸ ಪ್ರಕರಣಗಳು ದಾಖಲಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 30,751ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ ಪಾಸಿಟಿವ್ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಿಂದ 207, ವಿಷಮಶೀತ ಜ್ವರವಿರುವ 127, ಉಸಿರಾಟದ ಸಮಸ್ಯೆ ಹೊಂದಿರುವ 13 ಹಾಗೂ ಪ್ರವಾಸದ ಹಿನ್ನೆಲೆಯ 96 ಮಂದಿಗೆ ಸೋಂಕು ತಗುಲಿದೆ. ಅಲ್ಲದೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ9 ಮಂದಿಸೋಂಕಿತರು ತೀವ್ರ ಉಸಿರಾಟದ ಸಮಸ್ಯೆ ಯಿಂದ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 715ಕ್ಕೆ ಏರಿಕೆಯಾಗಿದೆ.
936 ಮಂದಿ ಗುಣಮುಖ: ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದರೆ, ಮತ್ತೂಂದೆಡೆ ಸೋಂಕಿನಿಂದ ಚೇತರಿಸಿ ಕೊಂಡು ಗುಣಮುಖರಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ಸೋಮವಾರ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 936 ಮಂದಿ ಸೋಂಕಿತರು ಗುಣಮುಖ ವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಗುಣಮುಖರಾದವರ ಸಂಖ್ಯೆ 26,051ಕ್ಕೆ ಏರಿಕೆಯಾಗಿದೆ.
ಸದ್ಯ ಜಿಲ್ಲೆಯಲ್ಲಿ 3,985 ಮಂದಿ ಸೋಂಕಿತರಿದ್ದು, ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 304, ಕೋವಿಡ್ ಹೆಲ್ತ್ ಕೇರ್ ಸೆಂಟರ್‌ಗಳಲ್ಲಿ 717, ಖಾಸಗಿ ಆಸ್ಪತ್ರೆಗಳಲ್ಲಿ 304, ಹೋಂ ಐಸೊಲೇಷನ್‌ನಲ್ಲಿ 2483 ಹಾಗೂ ಖಾಸಗಿ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ 180 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.