Advertisement

ಉಡುಪಿ 14, ದ.ಕ. 9 ಮಂದಿಗೆ ಕೋವಿಡ್‌   

12:41 AM Jul 22, 2022 | Team Udayavani |

ಉಡುಪಿ/ಮಂಗಳೂರು: ಉಡುಪಿ ಜಿಲ್ಲೆಯಲ್ಲಿ ಕೋವಿಡ್‌ ಪಾಸಿಟಿವ್‌ ಪ್ರಮಾಣ ಒಂದೇ ಸಲಕ್ಕೆ ಹೆಚ್ಚಾಗಿದ್ದು ಗುರುವಾರ 14 ಮಂದಿಗೆ ಸೋಂಕು ದೃಢಪಟ್ಟಿದೆ. 480 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದೆ. ನಾಲ್ವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 32 ಪ್ರಕರಣಗಳು ಸಕ್ರಿಯವಾಗಿವೆ.

Advertisement

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 9 ಮಂದಿಗೆ ಕೋವಿಡ್‌ ಪ್ರಕರಣ ದೃಢಪಟ್ಟಿದೆ. 16 ಮಂದಿ ಗುಣಮುಖರಾಗಿದ್ದಾರೆ. 63 ಸಕ್ರಿಯ ಪ್ರಕರಣಗಳಿವೆ. ಶೇ. 1.06 ಪಾಸಿಟಿವಿಟಿ ದರ ದಾಖಲಾಗಿದೆ.

ಲಸಿಕೆ: ಉಡುಪಿಯಲ್ಲಿ 17 ಮಂದಿ ಮೊದಲ ಬಾರಿಗೆ, 21 ಮಂದಿ ಎರಡನೇ ಬಾರಿಗೆ ಲಸಿಕೆ ಪಡೆದುಕೊಂಡರು. 2494 ಮಂದಿ ಮುನ್ನೆಚ್ಚರಿಕೆ ಲಸಿಕೆ ಪಡೆದುಕೊಂಡರು.

Advertisement

Udayavani is now on Telegram. Click here to join our channel and stay updated with the latest news.

Next