Advertisement

ವಿಜಯಪುರ : ಜಿಲ್ಲೆಯಲ್ಲಿ ಮತ್ತೆ 596 ಸೋಂಕಿತರು ಪತ್ತೆ,  ನಾಲ್ವರ ಸಾವು

08:49 PM May 04, 2021 | Suhan S |

ವಿಜಯಪುರ: ಜಿಲ್ಲೆಯಲ್ಲಿ ಮಂಗಳವಾರ ಮತ್ತೆ 596 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು,  ನಾಲ್ವರು ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ತಿಳಿಸಿದ್ದಾರೆ.

Advertisement

ಜಿಲ್ಲೆಯಲ್ಲಿ ಒಂದೇ ದಿನ 596 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಪ್ರಮುಖವಾಗಿ ವಿಜಯಪುರ ನಗರದಲ್ಲಿ 174,  ಮುದ್ದೇಬಿಹಾಳ ತಾಲ್ಲೂಕಿನಲ್ಲಿ 151, ಇಂಡಿ ತಾಲೂಕಿನಲ್ಲಿ 105 ಸೋಂಕಿತರು ಹೊಸದಾಗಿ‌ ಪತ್ತೆಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 23109 ಕ್ಕೆ ಏರಿದ್ದು ಪರಿಸ್ಥಿತಿ ಕೈಮೀರುವ ಅಪಾಯದ ಮುನ್ಸೂಚನೆ ನೀಡುತ್ತಿದೆ. ಇದೇ ದಿನ 405 ಜನರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದರೂ ಸಕ್ರೀಯ ರೋಗಿಗಳ ಸಂಕ್ಯೆ 3000 ಕ್ಕೆ ಏರಿಕೆಯಾಗಿದೆ.

ಸೋಂಕಿತರಲ್ಲಿ ಮತ್ತೆ ನಾಲ್ವರು ವಿವಿಧ ಕಾಯಿಲೆಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಾಗ ಮೃತಪಟ್ಟಿದ್ದಾರೆ. ಕೋವಿಡ್ ಸೋಂಕಿತ 73 ವರ್ಷದ ವೃದ್ಧ ಪಿ-1130818, 58 ವರ್ಷದ ಮಹಿಳೆ ಪಿ-1163939, 65 ವರ್ಷದ ಪುರುಷ  ಪಿ-1373037 ಹಾಗೂ 60 ವರ್ಷದ ಪುರುಷ ಪಿ-1374082 ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಕೋವಿಡ್ ಸೋಂಕಿನಿಂದ ಮೃತಪಟ್ಟ ನಾಲ್ಕೂ ವ್ಯಕ್ತಿಗಳ ಶವಗಳ  ಅಂತ್ಯ ಸಂಸ್ಕಾರ ಶಿಷ್ಟಾಚಾರದಂತೆ ನೆರವೇರಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next