Advertisement

ವಿಜಯಪುರ ಜಿಲ್ಲೆಯ ವಿದ್ಯಾರ್ಥಿ ಶಿಕ್ಷಕರು ಸೇರಿ 248 ಕೋವಿಡ್ ಸೋಂಕಿತರು

09:21 PM Mar 21, 2021 | Suhan S |

ವಿಜಯಪುರ : ಕೋವಿಡ್ ಎರಡನೇ ಅಲೆಯ ಅಬ್ಬರದ ಭೀತಿಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮಹಾರಾಷ್ಟ್ರ ರಾಜ್ಯದ ಗಡಿಯಲ್ಲಿ ನಿರ್ಬಂಧ ಹೇರಿದೆ. ಇದರ ಬೆನ್ನಲ್ಲೇ ಜಿಲ್ಲೆಯ ಶಾಲೆ ಕಾಲೇಜುಗಳಲ್ಲಿ ವಿದ್ಯಾರ್ಥಿ, ಶಿಕ್ಷಕರು, ಸಿಬ್ಬಂದಿಗಳ ಗಂಟಲು ದ್ರವ ಮಾದರಿ ಸಂಗ್ರಹಿಸಿದ್ದು, 248 ಜನರಲ್ಲಿ ಸೋಂಕು ದೃಢಪಟ್ಟಿದೆ.

Advertisement

ಕಳೆದ ನವೆಂಬರ್ 18 ರಿಂದ ಈ  ವರೆಗೆ ಜಿಲ್ಲೆಯ ಪದವಿ, ಪದವಿ ಪೂರ್ವ ಕಾಲೇಜುಗಳಲ್ಲಿ 45,198 ವಿದ್ಯಾರ್ಥಿಗಳ ಗಂಟಲು ದ್ರವ ಮಾದರಿ ಸಂಗ್ರಹಿಸಿ, ಪರೀಕ್ಷಿಸಿದ್ದು, 173 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ. ಗಂಟಲು ದ್ರವ ಮಾದರಿ ಪರೀಕ್ಷೆ ಮಾಡಿಸಿಕೊಂಡಿರುವ 7,440 ಉಪನ್ಯಾಸಕರಲ್ಲಿ 46 ಜನರಲ್ಲಿ ಸೋಂಕು ದೃಢಪಟ್ಟಿದೆ.

ತೊರವಿ ಬಳಿ ಇರುವ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು, ಉಪನ್ಯಾಸಕರು, ಸಿಬ್ಬಂದಿ ಸೇರಿದಂತೆ 792 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷಿಸಿದ್ದು, 21 ಜನರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಈ ಮಧ್ಯೆ ನಗರದಲ್ಲಿರುವ ಸೈನಿಕ ಶಾಲೆಯಲ್ಲಿ 140 ವಿದ್ಯಾರ್ಥಿಗಳ ಗಂಟದಲು ದ್ರವ ಮಾದರಿ ಪರೀಕ್ಷಿಸಿದ್ದು, 8 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.

ಜಿಲ್ಲೆಯಲ್ಲಿ ಶೈಕ್ಷಣಿಕ ಕೇಂದ್ರಗಳಲ್ಲಿ ಕಂಡು ಬಂದಿರುವ ಸೋಂಕಿತರಲ್ಲಿ ಬಹುತೇಕರಿಗೆ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ. ಸೋಂಕಿತರಿಗೆ ಸರ್ಕಾರಿ ನಿಯಮದಂತೆ ಚಿಕಿತ್ಸೆ ನೀಡಿ, ಕ್ವಾರಂಟೈನ್ ಮಾಡಲಾಗಿದೆ. ಕ್ವಾರಂಟೈನ್ ಮುಗಿಸಿದವರನ್ನು ಬಿಡುಗಡೆ ಮಾಡಲಾಗಿದೆ.

ಈ ಮಧ್ಯೆ ಕೋವಿಡ್ ಲಸಿಕೆ ನೀಡುವ ಪ್ರಕ್ರಿಯೆ ಮುಂದು ವರೆದಿದೆ. ಜನೇವರಿ 16 ರಂದು ಆರಂಭವಾದ ಕೋವಿಡ್ ಲಸಿಕೆ ಕಾರ್ಯಕ್ರಮದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಮೊದಲ ಹಂತದ 12,227 ಹಾಗೂ ಎರಡನೇ ಹಂತದಲ್ಲಿ 6,121 ಜನರಿಗೆ ಲಸಿಕೆ ವಿತರಿಸಲಾಗಿದೆ. ಮುಂಚೂಣಿ ಕಾರ್ಯಕರ್ತರಿಗೆ ಮೊದಲ ಹಂತದಲ್ಲಿ 7,048 ಹಾಗೂ 2,483 ಜನರಿಗೆ ಕೋವಿಡ್ ಲಸಿಕೆ ಹಾಕಲಾಗಿದೆ. 45 60 ವರ್ಷದೊಳಗಿನ 5,052 ಜನರಿಗೆ ಹಾಗೂ 60 ವರ್ಷ ಮೇಲ್ಪಟ್ಟ 14,681 ಜನರಿಗೆ ಕೋವಿಡ್ ಲಸಿಕೆ ಹಾಕಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

Advertisement

ಇನ್ನು ಕೋವಿಡ್ ಎರಡನೇ ಅಲೆಯ ಅಬ್ಬರ ಹೆಚ್ಚಿರುವ ಮಹಾರಾಷ್ಟ್ರ ರಾಜ್ಯಕ್ಕೆ ಕರ್ನಾಟಕದ ವಿಜಯಪುರ ಜಿಲ್ಲೆ ಹೊಂದಿಕೊಂಡಿದೆ. ಅದರಲ್ಲೂ ರಾಷ್ಟ್ರೀಯ ಹೆದ್ದಾಗಿ, ರಾಜ್ಯ ಹೆದ್ದಾರಿಗಳ ಮಾರ್ಗವಾಗಹಿ ನಿತ್ಯವೂ ಸಾವಿರಾರು ವಾಹನಗಳು ವಿಜಯಪುರ ಜಿಲ್ಲೆಯ ಮಾರ್ಗವಾಗಿ ರಾಜ್ಯದ ಇತರೆ ಪ್ರದೇಶಗಳಿಗೆ ಬಂದುಹೋಗುತ್ತವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿಯಲ್ಲಿ ಮಹಾರಾಷ್ಟ್ರ ರಾಜ್ಯದಿಂದ ಸಂಪರ್ಕ ಪಡೆಯುವ ರಸ್ತೆಗಳಲ್ಲಿ ಚಕ್‍ಪೋಸ್ಟ್ ನಿರ್ಮಿಸಿದ್ದು, ಮಹಾರಾಷ್ಟ್ರ ರಾಜ್ಯದಿಂದ ಜಿಲ್ಲೆಗೆ ಬರುವವರ ಮೇಲೆ ಜಿಲ್ಲಾಡಳಿತದ ಅಧಿಕಾರಿಗಳ ತಂಡ ನಿಗಾ ಇರಿಸಿದೆ.

ಇದಲ್ಲದೇ ಜಿಲ್ಲೆಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸುವವರ ವಿರುದ್ಧ ಕೋವಿಡ್ ನಯಮದಂತೆ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿರುವ ಜಿಲ್ಲಾಧಿಕಾರಿ ಸುನಿಲಕುಮಾರ, ಕೋವಿಡ್ ನಿಗ್ರಹಕ್ಕಾಗಿ ಮಾಸ್ಕ್ ಧರಿಸಿವುದು, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಅನಗತ್ಯವಾಗಿ ಮನೆಯಿಂದ ಹೊರ ಬರದಂತೆ ಜನರು ಸಹಕರಿಸಬೇಕು ಎಂದು ಜಿಲ್ಲಾಡಳಿತದ ಪರವಾಗಿ ಮನವಿ ಮಾಡಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next