Advertisement

ಕರ್ನಾಟಕ, ಮಹಾರಾಷ್ಟ್ರ, ಕೇರಳ, ಪಂಜಾಬ್ ನಲ್ಲಿ ಕೋವಿಡ್ ಪ್ರಕರಣಗಳ ಏರಿಕೆ..!

07:39 PM Mar 03, 2021 | Team Udayavani |

ನವದೆಹಲಿ : ಕರ್ನಾಟಕ, ಮಹಾರಾಷ್ಟ್ರ, ಕೇರಳ, ಪಂಜಾಬ್, ಗುಜರಾತ್ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

Advertisement

ಇಡೀ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ದೃಢಪಟ್ಟ ಪ್ರಕರಣಗಳಲ್ಲಿ ಶೇ 85.95 ಕೋವಿಡ್ ಪ್ರಕರಣಗಳು ಈ ಮೇಲ್ಕಂಡ ರಾಜ್ಯಗಳಲ್ಲಿ ವರದಿಯಾಗಿವೆ ಎಂದು ತಿಳಿಸಿದೆ.

24 ಗಂಟೆಯಲ್ಲಿ ಒಟ್ಟು ದೇಶದಲ್ಲಿ ಬರೋಬ್ಬರಿ 14,989 ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಮಹಾರಾಷ್ಟ್ರ- 7,863 ಪ್ರಕರಣ, ಕೇರಳ-2,938, ಪಂಜಾಬ್‌-729 ಹೊಸ ಪ್ರಕರಣಗಳು ವರದಿಯಾಗಿವೆ.

ಕಳೆದ ಒಂದು ವಾರದಲ್ಲಿ ಮಹಾರಾಷ್ಟ್ರವೊಂದರಲ್ಲೇ 16,012 ಪ್ರಕರಣಗಳು ದಾಖಲಾಗಿವೆ. ಅಲ್ಲದೆ ವಾರದಿಂದ ವಾರಕ್ಕೆ ಮಹಾರಾಷ್ಟ್ರ, ಪಂಜಾಬ್, ಗುಜರಾತ್, ಮಧ್ಯ ಪ್ರದೇಶ, ದೆಹಲಿ, ಹರಿಯಾಣ, ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿವೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next