Advertisement
ಚಳಿ ಸಹಿತ ಹವಾಮಾನ ವೈಪರೀತ್ಯದ ಪರಿಣಾಮ ಜನವರಿ, ಫೆಬ್ರವರಿ ತಿಂಗಳಿನಲ್ಲಿ ಸಾಮಾನ್ಯವಾಗಿ ಈ ರೀತಿಯ ಸಾಂಕ್ರಾಮಿಕ ರೋಗ ಕಾಣಿಸಿಕೊಳ್ಳುತ್ತದೆ. ಆದರೆ, ಈ ಬಾರಿ ಈ ರೋಗ ಹೆಚ್ಚಿನವರಲ್ಲಿ ಕಾಣಿಸಿಕೊಳ್ಳುತ್ತಿದೆ. ಶೀತ, ಜ್ವರ, ಗಂಟಲ ನೋವು ಸಹಿತ ಯಾವುದೇ ರೋಗಕ್ಕೆ ಒಳಗಾದರೆ ಸಾರ್ವಜನಿಕರು ಕೂಡಲೇ ವೈದ್ಯರನ್ನು ಭೇಟಿಯಾಗಿ ಸೂಕ್ತ ಸಲಹೆ ಪಡೆದುಕೊಳ್ಳಬೇಕಿದೆ. ಯಾವುದೇ ಕಾರಣಕ್ಕೆ ಮನೆ ಮದ್ದು ಸಹಿತ ಔಷಧಕ್ಕೆಂದು ದಿನವ್ಯಯ ಮಾಡಿದರೆ ರೋಗ ಮತ್ತಷ್ಟು ಗಂಭೀರತೆ ಪಡೆಯುವ ಸಾಧ್ಯತೆ ಹೆಚ್ಚಿರುತ್ತದೆ.
Related Articles
ಸಾರ್ವಜನಿಕರು ಕುದಿಸಿ ಆರಿಸಿದ ಉಗುರು ಬೆಚ್ಚಗಿನ ನೀರನ್ನೇ ಕುಡಿಯಬೇಕು. ಜ್ವರ ಬಾಧಿಸಿದ ಯಾರೂ ಕೂಡ ತಣ್ಣೀರನ್ನು ಕುಡಿಯಲೇಬಾರದು. ಜ್ವರ ಕಡಿಮೆಯಾಗುವವರೆಗೆ ತಲೆ ಸ್ನಾನ ಮಾಡದಿರುವುದೇ ಉತ್ತಮ. ನಿತ್ರಾಣ ಇಲ್ಲದಂತಾಗಲು ಸರಿಯಾದ ರೀತಿಯಲ್ಲಿ ಆಹಾರ ತೆಗೆದುಕೊಳ್ಳಬೇಕು. ತಂಪು ಪಾನೀಯ ಸೇವಿಸದಿರುವುದೇ ಉತ್ತಮ ಎನ್ನುತ್ತಾರೆ ವೈದ್ಯರು.
Advertisement
ನಿರ್ಲಕ್ಷಿಸಬೇಡಿಕೆಲ ದಿನಗಳಿಂದ ಹೆಚ್ಚಿನ ಮಂದಿ ಶೀತ, ಜ್ವರ, ಗಂಟಲು ನೋವು ಸಮ ಸ್ಯೆಗೆ ತುತ್ತಾಗುತ್ತಿದೆ. ಚಳಿಗಾಲದಲ್ಲಿ ಸಾಮಾನ್ಯ ವಾಗಿ ಬ್ಯಾಕ್ಟೀರಿಯ ತೀವ್ರತೆ ಹೆಚ್ಚಾಗಿ ಈ ರೀತಿಯ ಕಾಯಿಲೆಗೆ ತುತ್ತಾಗುತ್ತಾರೆ. ಆದರೆ ಈ ಬಾರಿ ಸಾಂಕ್ರಾಮಿಕ ರೋಗದ ತೀವ್ರತೆ ಹೆಚ್ಚಿದೆ. ಜನ ಸಾಮಾನ್ಯರು ಯಾವುದೇ ರೋಗವನ್ನು ನಿರ್ಲಕ್ಷಿಸದೆ ವೈದ್ಯರನ್ನು ಭೇಟಿಯಾಗಬೇಕು..
-ಡಾ| ಸುರೇಶ್ ನೆಗಳಗುಳಿ,
ಆಯುರ್ವೇದ, ಅಲೋಪತಿ ತಜ್ಞರು ಸ್ವಯಂ ಪಾಲನೆಯಿಂದ ನಿಯಂತ್ರಣ
ಮಲೇರಿಯಾ, ಡೆಂಗ್ಯೂ ಸಹಿತ ಸಾಂಕ್ರಾಮಿಕ ರೋಗಗಳ ಬಗ್ಗೆ ಪ್ರತಿಯೊಬ್ಬರು ಜಾಗರೂಕರಾಗಬೇಕಾದ ಆವಶ್ಯಕತೆ ಇದೆ. 2020ಕ್ಕೆ ಹೋಲಿಸಿದರೆ 2021ರಲ್ಲಿ ಮಲೇರಿಯಾ ಪ್ರಮಾಣ ಕಡಿಮೆಯಾಗಿದೆ. ಆದರೂ, ಜಾಗರೂಕತೆ ಅಗತ್ಯ. ಡೆಂಗ್ಯೂ ಹರಡುವ ಲಾರ್ವಾ ಉತ್ಪತ್ತಿಯಾಗುವುದೇ ನಿಂತಿರುವ ಶುದ್ಧ ನೀರಿನಲ್ಲಿ. ಮನೆ ಸುತ್ತಮುತ್ತ ನೀರು ನಿಲ್ಲಿಸದಂತೆ ಆರೋಗ್ಯ ಇಲಾಖೆ ಆಗಾಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಲೇ ಇದೆ. ಜನ ಸ್ವಯಂ ಎಚ್ಚರಿಕೆ ವಹಿಸಿಕೊಂಡು ಇದನ್ನು ಪಾಲನೆ ಮಾಡಬೇಕು. ಹಾಗಿದ್ದರೆ ಮಾತ್ರ ರೋಗ ನಿಯಂತ್ರಣ ಸಾಧ್ಯವಾಗುತ್ತದೆ.
-ಡಾ| ನವೀನ್‌ಚಂದ್ರ ಕುಲಾಲ್,
ಜಿಲ್ಲಾ ರೋಹವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ