Advertisement

ಕೋವಿಡ್ ವಿರುದ್ಧ ಹೋರಾಡಲು ಕೈ ಜೋಡಿಸಿ : ರಾಜ್ಯದ ಜನರಲ್ಲಿ ಅಬ್ಬಿಗೆರೆ ಮನವಿ

07:24 PM Jun 20, 2021 | Team Udayavani |

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಸಲಹೆಯಂತೆ ಕರೋನಾ ಮೂರನೇ ಅಲೆಯ ವಿರುದ್ದ ರಾಜ್ಯಕ್ಕೆ ಯಾವುದೇ ತೊಂದರೆಯಾಗದಂತೆ ಎಲ್ಲರೂ ಜಾಗೃತರಾಗಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಕರ್ನಾಟಕ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷ ಜಿ ಮನೋಹರ್ ಅಬ್ಬಿಗೆರೆ ಜನತೆಗೆ ಮನವಿ ಮಾಡಿದ್ದಾರೆ.

Advertisement

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೊರೊನಾ ಸಂದರ್ಭದಲ್ಲಿ ನಾವೆಲ್ಲರೂ ಜಾತಿ, ದರ್ಮ, ರಾಜಕೀಯ ಬಿಟ್ಟು ಎಲ್ಲರೂ ಒಗ್ಗಟಾಗಿ ಕರೋನಾ ವಿರುದ್ದ ಹೋರಾಡಬೇಕೇ ಹೊರತು ಯಾವುದೇ ವ್ಯಕ್ತಿಯ ವಿರುದ್ದವಲ್ಲ ಎಂದು ಹೇಳಿದ್ದಾರೆ.

ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾದ ಶ್ಯಾಮನೂರು ಶಿವಶಂಕರಪ್ಪನವರು ಹೇಳಿರುವಂತೆ ಜನಸೇವಕರು ರಾಜ್ಯದ ಅಭಿವೃದ್ಧಿಯ ಕಡೆ ಗಮನ ಹರಿಸಬೇಕು, ಜನರ ಸಮಸ್ಯಗೆ ಸ್ಪಂದಿಸಬೇಕು.ನಾವೆಲ್ಲರೂ
ಎಚ್ಚರವಹಿಸೋಣ ಎಂದು ಜನತೆಯಲ್ಲಿ ಕೋರಿಕೊಂಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರದಲ್ಲಿ ಮುಂದುವರೆಯಬೇಕು. ಇಂತಹ ಇಳಿವಯಸ್ಸಿನಲ್ಲೂ ಅವರು ಸ್ವಲ್ಪವೂ ದೃತಿಗೆಡದೆ ಕೊರೊನಾ ಬಿಕ್ಕಟ್ಟನ್ನು ಅತ್ಯಂತ ಸಮರ್ಪಕವಾಗಿ ನಿರ್ವಹಿಸಿದ್ದಾರೆ. ಅವರಿಗೆ ಪ್ರತಿಯೊಬ್ಬರೂ ನೈತಿಕ ಬೆಂಬಲ ನೀಡುವಂತೆಯೂ ಆಗ್ರಹಿಸಿದ್ದಾರೆ.

ಇದನ್ನೂ ಓದಿ : ದಕ್ಷಿಣ ಕನ್ನಡ : ಅಗತ್ಯ ವಸ್ತು ಖರೀದಿಗೆ ಅವಧಿ ವಿಸ್ತರಣೆ, ನೈಟ್ ಕರ್ಫ್ಯೂ ಮುಂದುವರಿಕೆ

Advertisement

ಕೇವಲ ಒಬ್ಬರಿಂದ ಮಾತ್ರ ಸೋಂಕು ಹಬ್ಬುವುದನ್ನು ತಡೆಗಟ್ಟಲು ಸಾಧ್ಯವಿಲ್ಲ.ಇಂತಹ ವಿಷಮ ಪರಿಸ್ಥಿತಿಯಲ್ಲಿ ಎಲ್ಲಾ ಜನನಾಯಕರು ಕೊರೊನಾ ವಿರುದ್ಧ ಹೋರಾಟ ನಡೆಸಲು ಕೈ ಜೋಡಿಸಬೇಕು ಎಂದು ಜಿ ಮನೋಹರ್ ಅಬ್ಬಿಗೆರೆ ಪತ್ರಿಕಾ ಪ್ರಕಟಣೆಯಲ್ಲಿ ಪ್ರಾರ್ಥಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next