Advertisement
ಔಷಧ ಕಾಳಸಂತೆಯಲ್ಲಿ ಮಾರಾಟವಾಗು ವುದನ್ನು ತಡೆಯಬೇಕು, ಸಾವನ್ನಪ್ಪಿದ ಸೋಂಕಿತರ ಅಂತ್ಯಕ್ರಿಯೆಯಲ್ಲಿ ಆಗುತ್ತಿರುವ ವಿಳಂಬ ತಪ್ಪಿಸಬೇಕು ಎಂದು ಸೂಚನೆ ನೀಡಿದೆ.
Related Articles
Advertisement
ಶುಕ್ರವಾರವೂ ವಿಚಾರಣೆ :
ಕೋವಿಡ್ ಪರಿಸ್ಥಿತಿಯ ತೀವ್ರತೆಯನ್ನು ಅರಿತಿರುವ ಹೈ ಕೋರ್ಟ್, ಶುಕ್ರವಾರವೂ ವಿಚಾರಣೆ ನಡೆಸುವುದಾಗಿ ಹೇಳಿದೆ. ಅಲ್ಲದೆ, ಅಗತ್ಯ ಬಿದ್ದರೆ ಸೋಮವಾರವೂ ವಿಶೇಷ ಕಲಾಪ ನಡೆಸಿ ಸರಕಾರಕ್ಕೆ ನಿರ್ದೇಶನ ನೀಡಲಾಗುವುದು ಎಂದಿತು.
ಸಮಿತಿ ರಚನೆ ಅಗತ್ಯವಿಲ್ಲ: ಸರಕಾರ :
ಕೋವಿಡ್ ನಿಯಂತ್ರಣಕ್ಕೆ ನಾನಾ ವಲಯಗಳ ತಜ್ಞರ ಸಮಿತಿಯನ್ನು ರಚಿಸಬೇಕು ಎಂದು ಹೈಕೋರ್ಟ್ ಕಳೆದ ವಿಚಾರಣೆ ವೇಳೆ ನೀಡಿದ್ದ ನಿರ್ದೇಶನದ ಕುರಿತು ವಿಚಾರಣೆ ವೇಳೆ ಪ್ರತಿಕ್ರಿಯಿಸಿದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಈ ಹಂತದಲ್ಲಿ ಸಮಿತಿ ರಚನೆ ಅಗತ್ಯವಿಲ್ಲ. ಈಗಾಗಲೇ ಮುಖ್ಯಮಂತ್ರಿಗಳು ಸಮರ್ಪಕ ರೀತಿಯಲ್ಲಿ ನಿರ್ವಹಿಸುತ್ತಿದ್ದಾರೆ. ಜತೆಗೆ ಸಚಿವರ ಸಮಿತಿಗಳು ದಿನದ 24 ಗಂಟೆಗಳೂ ಕಾರ್ಯನಿರ್ವಹಿಸುತ್ತಿವೆ. ಸರಕಾರದ ಶೇ.50ರಷ್ಟು ಸಿಬಂದಿಯನ್ನು ಕೋವಿಡ್ ಕಾರ್ಯಕ್ಕೆ ನಿಯೋಜಿಸಲಾಗಿದೆ ಎಂದು ಹೇಳಿದರು.
ಪ್ರಮುಖ ನಿರ್ದೇಶನಗಳು :
- ಸೋಂಕಿತರು ಆಸ್ಪತ್ರೆಗಳಲ್ಲಿ ಹಾಸಿಗೆಗಳಿಗೆ ಪರದಾಡುವುದನ್ನು ತಪ್ಪಿಸಬೇಕು. ಸೂಕ್ತ ಮಾಹಿತಿ ನೀಡಲು ಎಲ್ಲ ಆಸ್ಪತ್ರೆಗಳ ಮುಂಭಾಗದಲ್ಲಿ ಹೆಲ್ಪ್ ಡೆಸ್ಕ್ ತೆರೆಯಬೇಕು.
- 24 ಗಂಟೆಗಳಲ್ಲೇ ಆರ್ ಟಿಪಿಸಿಆರ್ ವರದಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು.
- ಸೋಂಕು ಪರೀಕ್ಷಾ ಕೇಂದ್ರಗಳ ಮುಂದೆ ದಟ್ಟಣೆಯನ್ನು ತಗ್ಗಿಸಬೇಕು, ವೃದ್ಧರು ಮತ್ತು ಗರ್ಭಿಣಿಯರಿಗೆ ಪ್ರತ್ಯೇಕ ಸರತಿ ಸಾಲು ರಚಿಸಬೇಕು.
- ಕೊರೊನಾ ಲಕ್ಷಣಗಳಿಲ್ಲದ ಗರ್ಭಿಣಿಯರಿಗೆ ಆಸ್ಪತ್ರೆಗಳಿಗೆ ಪ್ರವೇಶಕ್ಕೆ ಅವಕಾಶ ಮಾಡಿಕೊಡಬೇಕು.
- ರೆಮಿಡಿಸಿವಿರ್ ಔಷಧ ಕಾಳಸಂತೆಯಲ್ಲಿ ಮಾರಾಟವಾಗುವುದನ್ನು ತಪ್ಪಿಸಬೇಕು ಹಾಗೂ ಅವುಗಳ ವ್ಯವಹಾರದಲ್ಲಿ ಪಾರದರ್ಶಕತೆ ಪ್ರದರ್ಶಿಸಬೇಕು.
- ಆಕ್ಸಿಜನ್ ಲಭ್ಯತೆ ಖಾತ್ರಿಗೆ ಕ್ರಮ ಕೈಗೊಳ್ಳಬೇಕು.
- ಚಿತಾಗಾರಗಳ ಮೇಲಿನ ಒತ್ತಡವನ್ನು ತಗ್ಗಿಸಬೇಕು. ಮೃತ ಸೋಂಕಿತರ ಅಂತ್ಯಕ್ರಿಯೆ ಗೌರವಯುತವಾಗಿ ನಡೆಯುವಂತೆ ಮಾಡಬೇಕು.
- ಮುಂದಿನ ದಿನಗಳಲ್ಲಿ ಸೋಂಕು ಇನ್ನೂ ತೀವ್ರವಾಗಿ ಹರಡಲಿದೆ ಎಂದು ತಜ್ಞರ ಸಮಿತಿ ಅಂದಾಜಿಸಿರುವುದರಿಂದ ಸರಕಾರ ಅಗತ್ಯ ಸಿದ್ಧತೆ ಮಾಡಬೇಕು.