Advertisement

ನೌಕರರ ಕೋವಿಡ್‌ ಚಿಕಿತ್ಸಾ ವೆಚ್ಚ ಭರಿಸುವ ಕ್ರಮಕ್ಕೆ ಅಭಿನಂದನೆ

02:02 PM Aug 10, 2020 | Suhan S |

ಯಾದಗಿರಿ: ಕೋವಿಡ್ ಕರ್ತವ್ಯದ ವೇಳೆ ಸೋಂಕಿಗೆ ಗುರಿಯಾದ ನೌಕರರಿಗೆ ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸುವುದಾಗಿ ರಾಜ್ಯ ಸರ್ಕಾರ ಆದೇಶಿಸಿದ್ದು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಯಾದಗಿರಿ ಜಿಲ್ಲಾ ಶಾಖೆ ಅಭಿನಂದನೆ ಸಲ್ಲಿಸಿದೆ.

Advertisement

ಈ ಕುರಿತು ಹೇಳಿಕೆ ನೀಡಿರುವ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ ಮಾಲಿ ಪಾಟೀಲ್‌, ಕೋವಿಡ್ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರು ಹಾಗೂ ಪದಾಧಿಕಾರಿಗಳ ಮನವಿಗೆ ಸ್ಪಂದಿಸಿದ ಸರ್ಕಾರ ಕೋವಿಡ್ ಕರ್ತವ್ಯಕ್ಕೆ ನಿಯೋಜನೆಗೊಂಡ ಸರ್ಕಾರದ ಎಲ್ಲ ಇಲಾಖೆಗಳ ನೌಕರರು ಹಾಗೂ ಅವರ ಕುಟುಂಬಕ್ಕೆ ಮನೋಸ್ಥೈರ್ಯ ತುಂಬುವ ಸಲುವಾಗಿ ಕೋವಿಡ್ ಕರ್ತವ್ಯದ ಸಂದರ್ಭದಲ್ಲಿ ಮೃತಪಟ್ಟ ಸರ್ಕಾರಿ ನೌಕರರ ಕುಟುಂಬದವರಿಗೆ 30 ಲಕ್ಷ ಪರಿಹಾರ ಘೋಷಿಸಿತ್ತು.

ಈಗ ಕೋವಿಡ್ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಕೋವಿಡ್ ಸೋಂಕಿಗೆ ಒಳಗಾಗದ ನೌಕರರ ಸಂಪೊರ್ಣ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಹೇಳಿದ್ದು ಸಿಎಂಗೆ ಹಾಗೂ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌. ಷಡಕ್ಷರಿ ಹಾಗೂ ಪದಾಧಿಕಾರಿಗಳಿಗೆ ಯಾದಗಿರಿ ಜಿಲ್ಲಾ ಘಟಕದ ರಾಜ್ಯ ಪರಷತ್‌ ಸದಸ್ಯ ಸಂತೋಷ ನೀರೆಟಿ ಅಭಿನಂದನೆ ಸಲ್ಲಿಸಿದ್ದಾರೆ.

ಯಾದಗಿರಿ 91 ಜನರಿಗೆ ವೈರಸ್‌ ಕಾಟ :  ಜಿಲ್ಲೆಯಲ್ಲಿ ಕೋವಿಡ್ ಮಹಾಮಾರಿ ತಗುಲಿದವರ ಸಂಖ್ಯೆ ಮೂರು ಸಾವಿರದ ಗಡಿ ದಾಟಿದೆ. ಸೋಂಕಿನ ಮೂಲವೇ ಪತ್ತೆಯಾಗದವರಲ್ಲಿ ವೈರಸ್‌ ವ್ಯಾಪಕವಾಗಿ ಹರುಡುತ್ತಿದ್ದು ಸೋಂಕಿನಿಂದ ಆ.1ರಂದು ಆಸ್ಪತ್ರೆಗೆ ದಾಖಲಾಗಿದ್ದ 35 ವರ್ಷದ ಪುರುಷ ಪಿ-136374 ಆ.8ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಇಂದಿಗೆ ಸಾವನ್ನಪ್ಪಿದವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ರವಿವಾರವೂ ವೈರಸ್‌ ಅಟ್ಟಹಾಸ ಮುಂದುವರಿದಿದ್ದು ಮತ್ತೆ 91 ಜನರಿಗೆ ವೈರಸ್‌ ವಕ್ಕರಿಸಿದ್ದು, ಸೋಂಕಿತರ ಸಂಖ್ಯೆ 3061ಕ್ಕೆ ಏರಿಕೆಯಾಗಿದೆ. ಒಟ್ಟು 2119 ಜನರು ಸೋಂಕಿನಿಂದ ಗುಣಮುಖವಾಗಿದ್ದು, 925 ಸಕ್ರಿಯ ಪ್ರಕರಣಗಳಿವೆ.

Advertisement

Udayavani is now on Telegram. Click here to join our channel and stay updated with the latest news.

Next