Advertisement

ಕೋವಿಡ್ ವಾಸಿಯಾಗಬಲ್ಲ ಸೋಂಕು

07:26 PM Jan 17, 2021 | Team Udayavani |

ಭಾಲ್ಕಿ: ದೇಶ ಹಾಗೂ ರಾಜ್ಯಾದ್ಯಂತ ಕೋವಿಡ್‌-19 ಲಸಿಕೆ ವಿತರಣೆ ಅಭಿಯಾನಕ್ಕೆ ಚಾಲನೆ ದೊರೆತಿದ್ದು, ಶನಿವಾರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲೂ ಲಸಿಕೆ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಯಿತು.

Advertisement

ಆಸ್ಪತ್ರೆ ಸಿಬ್ಬಂದಿಗೆ ಲಸಿಕೆ ನೀಡಿ ಮಾತನಾಡಿದ ಪುರಸಭೆ ಅಧ್ಯಕ್ಷ ಬಸವರಾಜ ವಂಕೆ, ಕೋವಿಡ್‌ ಮಹಾ ಮಾರಿ ಜಗತ್ತನ್ನೇ ತಲ್ಲಣಗೊಳಿಸಿದೆ. ಈ ರೋಗಕ್ಕೆ ಲಸಿಕೆ ಲಭ್ಯವಾಗಿದ್ದು, ನಾವು ಇನ್ನು ಇದಕ್ಕೆ ಹೆದರುವ ಅವಶ್ಯಕತೆ ಇಲ್ಲ. ಎಲ್ಲಾ ರೋಗಗಳಂತೆ ಇದು ಒಂದು ವಾಸಿ ಯಾಗಬಲ್ಲ ಸೋಂಕಾಗಿದೆ ಎಂದರು.

ತಹಶೀಲ್ದಾರ್‌ ಅಣ್ಣಾರಾವ ಪಾಟೀಲ ಮಾತನಾಡಿ, ಪ್ರಾರಂಭಿಕ ಹಂತದಲ್ಲಿ ದೇಶಾದ್ಯಂತ ಒಂದು ಕೋಟಿ ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಜಿಲ್ಲೆಯಲ್ಲಿ ಈಗಾಗಲೇ ಅಂತರ್ಜಾಲದ ಮೂಲಕ 10240 ಜನ ತಮ್ಮ ಹೆಸರು ನೋಂದಾಯಿಸಿಕೊಂಡಿದ್ದು, ಈವರೆಗೆ 5,500 ಲಸಿಕೆಗಳು ಪೂರೈಕೆಯಾಗಿವೆ. ಜಿಲ್ಲೆಯಲ್ಲಿ ಆರು ಕೇಂದ್ರಗಳಲ್ಲಿ ನಿತ್ಯ 100 ಜನರಿಗೆ ಲಸಿಕೆ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಭಾಲ್ಕಿಯಲ್ಲಿಯೂ ಪ್ರತಿನಿತ್ಯ 100 ಜನರಿಗೆ ಲಸಿಕೆ ನೀಡಲಾಗುವುದು ಎಂದರು.

ಇದನ್ನೂ ಓದಿ:ಬಂಟ್ವಾಳ: ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯ ಮೇಲೆ ಪೊಲೀಸ್ ದಾಳಿ; ಆರೋಪಿಗಳು ವಶಕ್ಕೆ

ಈ ಸಂದರ್ಭದಲ್ಲಿ ತಾಪಂ ಅಧ್ಯಕ್ಷ, ಉಪಾಧ್ಯಕ್ಷರು ಸೇರಿದಂತೆ ಪುರಸಭೆ ಸದಸ್ಯ ವಿಜಯಕುಮಾರ ರಾಜಭವನ, ಡಾ| ನಿತೀನ ಪಾಟೀಲ, ರಾಜಕುಮಾರ ಮೋರೆ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next