Advertisement
ದೇಶದಲ್ಲಿ ಕೊರೊನಾ ಸೋಂಕು ಪ್ರಮಾಣ ಏರಿಕೆಯಾಗುತ್ತಿರುವಂತೆಯೇ ಹೊಸತಾಗಿ ಇರುವ ರೂಪಾಂತರಿಯೊಂದು ಬೆಳಕಿಗೆ ಬಂದಿದೆ. ಅದನ್ನು ಎಕ್ಸ್‌ಬಿಬಿ.1.16.1 ಎಂದು ಗುರುತಿಸಲಾಗಿದೆ. ಇದುವರೆಗೆ ದೇಶದಲ್ಲಿ 113 ಪ್ರಕರಣಗಳು ದೃಢಪಟ್ಟಿವೆ. ಹೊಸತಾಗಿ ದೃಢಪಟ್ಟಿರುವ ಈ ರೂಪಾಂತರಿಯು ಒಮಿಕ್ರಾನ್ ತಳಿಯ ಉಪ ರೂಪಾಂತರಿಯಾಗಿದೆ. ಹದಿನೈದು ತಿಂಗಳ ಅವಧಿಯಲ್ಲಿ ಒಮಿಕ್ರಾನ್‌ನ 400 ಉಪತಳಿಗಳು ಇರುವುದು ಖಚಿತಪಟ್ಟಿವೆ. ಈ ಪೈಕಿ ಶೇ.90 ಎಕ್ಸ್‌ಬಿಬಿಯ ರೂಪಾಂತರಿಯವೇ ಆಗಿದೆ.
Related Articles
Advertisement
ಕೇರಳ: ಕೇರಳದಲ್ಲಿ ಉಳಿದ ರಾಜ್ಯಗಳಿಗೆ ಹೋಲಿಸಿದರೆ ಕೋವಿಡ್ ಸೋಂಕು ತುಸು ಹೆಚ್ಚೇ ಇದೆ. ಶನಿವಾರ ರಾಜ್ಯದಲ್ಲಿ 1,801 ಜನರಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ.
ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಶನಿವಾರ ಮಾಸ್ಕ್ ಕಡ್ಡಾಯಯ ಬಗ್ಗೆ ಆದೇಶ ಹೊರಡಿಸಿದ್ದಾರೆ. ಗರ್ಭಿಣಿಯರು, ವೃದ್ಧರು ಮತ್ತು ವಯೋಸಹಜ ಕಾಯಿಲೆ ( ಜೀವನ ಶೈಲಿ ಕಾಯಿಲೆ) ಇರುವವರು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕೆಂದು ಹೇಳಿದ್ದಾರೆ.
ಕೋವಿಡ್ ಪರಿಸ್ಥಿತಿಯನ್ನು ಅವಲೋಕಿಸಲು ಉನ್ನತ ಮಟ್ಟದ ಸಭೆ ನಡೆಸಿದ ನಂತರ ಸಚಿವರು ಮಾತನಾಡಿ, ಕೋವಿಡ್ ಸಂಬಂಧಿತ ಸಾವುಗಳು ಹೆಚ್ಚಾಗಿ 60 ವರ್ಷಕ್ಕಿಂತ ಮೇಲ್ಪಟ್ಟವರಲ್ಲಿ ಮತ್ತು ಮಧುಮೇಹದಂತಹ ಜೀವನಶೈಲಿ ಕಾಯಿಲೆ ಇರುವವರಲ್ಲಿ ವರದಿಯಾಗುತ್ತಿವೆ. ಹೀಗಾಗಿ ಗರ್ಭಿಣಿಯರು, ವೃದ್ಧರು ಮತ್ತು ವಯೋಸಹಜ ಕಾಯಿಲೆ ಇರುವವರು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ ಎಂದಿದ್ದಾರೆ.
ಪುದುಚೇರಿ:
ಕೋವಿಡ್ -19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಪುದುಚೇರಿ ರಾಜ್ಯ ಸರ್ಕಾರ ಶುಕ್ರವಾರ ಸಾರ್ವಜನಿಕ ಸ್ಥಳಗಳಾದ ಬೀಚ್ ರಸ್ತೆ, ಉದ್ಯಾನವನಗಳು ಮತ್ತು ಚಿತ್ರಮಂದಿರಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವೆಂದು ಆದೇಶ ಹೊರಡಿಸಿದೆ.
ಆಸ್ಪತ್ರೆಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಮದ್ಯದ ಅಂಗಡಿಗಳು, ಮನರಂಜನಾ ಕ್ಷೇತ್ರಗಳು, ಸರ್ಕಾರಿ ಕಚೇರಿಗಳು ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ.
ಇಷ್ಟು ಮಾತ್ರವಲ್ಲದೇ ಕೊರೊನಾ ಸೋಂಕುಗಳ ಸಂಖ್ಯೆ ಹೆಚ್ಚುತ್ತಿರುವಂತೆಯೇ ಉತ್ತರಪ್ರದೇಶದ ಮೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಿಗೆ ಆಗಮಿಸುವ ವಿದೇಶಗಳಿಂದ ಆಗಮಿಸುವ ಪ್ರಯಾಣಿಕರಿಗೆ ಸೋಂಕು ಪರೀಕ್ಷೆ ಕಡ್ಡಾಯ ಮಾಡಲಾಗಿದೆ.