Advertisement
ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ತಾಲೂಕುಗಳ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕೋವಿಡ್-19ಗೆ ಚಿಕಿತ್ಸೆ ನೀಡುತ್ತಿದ್ದು, ಸಾರ್ವಜನಿಕರು ಚಿಕಿತ್ಸೆ ಪಡೆದುಕೊಳ್ಳಬಹುದು ಎಂದರು.
Related Articles
Advertisement
ಜಿಲ್ಲೆಯಲ್ಲಿ 20 ಕೋವಿಡ್ ಕೇರ್ ಸೆಂಟರ್‌ಗಳಿದ್ದು (ಸಿಸಿಸಿ), ಯಾವುದೇ ರೋಗ ಲಕ್ಷಣಗಳಿಲ್ಲದ ಕೋವಿಡ್ -19 ಸೋಂಕು ಇರುವವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇಲ್ಲಿಯವರೆಗೆ 1054 ಪ್ರಕರಣಗಳಿದ್ದು, ಹಾಸ್ಟೆಲ್,ಸಮುದಾಯ ಭವನ, ಲಾಡ್ಜ್ಗಳಲ್ಲಿ ಕೋವಿಡ್ ಕೇರ್ ಸೆಂಟರ್‌ಗಳು ಕಾರ್ಯನಿರ್ವಹಿಸುತ್ತಿವೆ. ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಡಾಕ್ಟರ್, ಶುಶ್ರೂಷಕಿ, ಗ್ರೂಪ್ ಡಿ ಸಿಬ್ಬಂದಿ ಇದ್ದು, ಇಲ್ಲಿ ಆಹಾರ, ಔಷ ಧವನ್ನು ಪೂರೈಸಲಾಗುತ್ತಿದೆ. 14 ದಿನ ಕೋವಿಡ್ ಕೇರ್ ಸೆಂಟರ್‌ನಲ್ಲಿದ್ದು ಗುಣಮುಖರಾದ ನಂತರ 7 ದಿನಗಳ ಕಾಲ ಹೋಂ ಕ್ವಾರಂಟೈನ್‌ನಲ್ಲಿರುವುದು ಕಡ್ಡಾಯ ಎಂದರು.
ಸಿಸಿಸಿಯಲ್ಲಿ ಒಟ್ಟು 1140 ಆಕ್ಸಿಜನ್ ಬೆಡ್‌ಗಳಿವೆ. ಪ್ರಸ್ತುತ 121 ಜನರು ಕೋವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿಸಿಸಿಯಲ್ಲಿ ರೋಗ ಲಕ್ಷಣಗಳು ಕಂಡು ಬಂದರೆ ಡಿಸಿಎಚ್ ಸಿಗೆ (ಡಿಡಿಕೇಟೆಡ್ ಕೋವಿಡ್ ಹೆಲ್ತ್ ಸೆಂಟರ್) ರವಾನಿಸಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಒಟ್ಟು 17 ಡಿಸಿಎಚ್‌ಸಿಗಳಿವೆ. ಇಲ್ಲಿ ಪಾಸಿಟಿವ್ ಮೈಲ್ಡ್ ಪ್ರಕರಣಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇಲ್ಲಿ ವೈದ್ಯರು, ಶುಶ್ರೂಷಕಿಯರು ಸೇರಿದಂತೆ ಆಹಾರ ಮತ್ತು ಔಷ ಧ ವಿತರಣೆಯ ಸೌಲಭ್ಯಗಳಿರುತ್ತವೆ. ಜೊತೆಗೆ ಆಕ್ಸಿಜನ್ ಬೆಡ್ ಸೌಲಭ್ಯವನ್ನೂ ಕಲ್ಪಿಸಲಾಗುತ್ತದೆ. ಪ್ರತಿ ತಾಲೂಕಿನಲ್ಲಿ 50 ಬೆಡ್‌ಗಳಂತೆ ಆಕ್ಸಿಜನ್ ಬೆಡ್‌ಗಳ ಸೌಲಭ್ಯವನ್ನು ಒದಗಿಸಲಾಗಿದೆ. ಒಟ್ಟು 250 ಆಕ್ಸಿಜನ್ ಬೆಡ್ ಸೌಲಭ್ಯವಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಸಿ. ಸಂಗಪ್ಪ, ಡಿಎಚ್‌ಒ ಡಾ| ಪಾಲಾಕ್ಷ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಬಸವರಾಜ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ತುಳಸಿರಂಗನಾಥ್ ಇದ್ದರು.