ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಒಬ್ಬರಿಗೆ ಕೋವಿಡ್ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣ ಮೂರಕ್ಕೆ ಏರಿಕೆಯಾಗಿದೆ.
ಹುಬ್ಬಳ್ಳಿ ಮೂಲದ 33 ವರ್ಷದ ವ್ಯಕ್ತಿಯೊಬ್ಬರು ಕಳೆದ ಎರಡು ದಿನದಿಂದ ನಿಶ್ಶಕ್ತಿ ಮತ್ತು ಜ್ವರ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರನ್ನು ತಪಾಸಣೆಗೆ ಒಳಪಡಿಸಿದಾಗ ಕೋವಿಡ್ ಇರುವುದು ದೃಢಪಟ್ಟಿದೆ.
ದ.ಕ. ಜಿಲ್ಲೆಯಲ್ಲಿ ವಿಶೇಷ ನಿಗಾ ಇರಿಸಿ, ಪ್ರತೀ ದಿನ 331 ಮಂದಿಯನ್ನು ಕೋವಿಡ್ ತಪಾಸಣೆಗೆ ಒಳಪಡಿಸಬೇಕು. 100 ರ್ಯಾಪಿಡ್ ಟೆಸ್ಟ್ ಮತ್ತು 231 ಆರ್‌ಟಿಪಿಸಿಆರ್ ಟೆಸ್ಟ್ ನಡೆಸಬೇಕು ಎಂದು ರಾಜ್ಯ ಸರಕಾರ ಗುರಿ ನೀಡಿತ್ತು. ಆದರೆ, ಸರಕಾರದ ಗುರಿ ಮುಟ್ಟಲು ಆರೋಗ್ಯ ಇಲಾಖೆ ಸಾಧ್ಯವಾಗುತ್ತಿಲ್ಲ. 331 ಗುರಿಯ ಪೈಕಿ ಜಿಲ್ಲೆಯಲ್ಲಿ ಡಿ. 22ರಂದು ಕೇವಲ 6 ಮಂದಿ ಯನ್ನಷ್ಟೇ ತಪಾಸಣೆಗೆ ಒಳಪಡಿಸಲಾಗಿದೆ.
ಕೋವಿಡ್ ತಪಾಸಣೆ
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಎಲ್ಲ ಪ್ರಾಥಮಿಕ ಹಾಗೂ ನಗರ ಆರೋಗ್ಯ ಕೇಂದ್ರ ಸಹಿತ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ತಪಾಸಣೆ ನಡೆಯುತ್ತಿದ್ದು, 50ಕ್ಕೂ ಅಧಿಕ ಮಂದಿಯನ್ನು ಪರೀಕ್ಷೆಗೊಳಪಡಿಸಲಾಗುತ್ತಿದೆ. ಇದು
ವರೆಗೂ ಯಾರಿಗೂ ಸೋಂಕು ದೃಢಪಟ್ಟಿಲ್ಲ.