Advertisement
ರಾಜ್ಯದ ಐಟಿ- ಬಿಟಿ ಇಲಾಖೆ ವ್ಯಾಪ್ತಿಯ ಬೆಂಗಳೂರು ಬಯೋ ಇನ್ನೋವೇಷನ್ ಕೇಂದ್ರದ ಅಡಿಯಲ್ಲಿ ಸಂಶೋಧನೆಯಲ್ಲಿ ನಿರತವಾಗಿರುವ ವಿವಿಧ ಸ್ಟಾರ್ಟ್‌ಅಪ್ ಗಳು ಈ ಉತ್ಪನ್ನಗಳನ್ನು ಅಭಿವೃದ್ಧಿಪಡಿಸಿದ್ದು, ಇದರಿಂದಾಗಿ ನಾವು ಬಹುತೇಕ ವಿದೇಶಿ ಅವಲಂಬನೆಯನ್ನು ತಗ್ಗಿಸಬಹುದಾಗಿದೆ. ಜತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆತ್ಮನಿರ್ಭರ್ ಭಾರತ ಪರಿಕಲ್ಪನೆಯ ಸ್ಫೂರ್ತಿಯಿಂದ ಇವೆಲ್ಲ ಸಿದ್ಧವಾಗಿವೆ ಎಂದು ಐಟಿ-ಬಿಟಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಮಂಗಳವಾರ ತಿಳಿಸಿದರು.
Related Articles
Advertisement
1.ಶೀಲೆಡೆಕ್ಸ್ 24ಕೋವಿಡ್ 19 ಅನ್ನು ಪರಿಣಾಮಕಾರಿಯಾಗಿ ನಿರ್ಮೂಲನೆ ಮಾಡುವ ಸಾಧನವಿದು. ಇದು ಮೈಕ್ರೋವೇವ್ ಬಾಕ್ಸ್ ರೀತಿಯಲ್ಲಿ ವಿವಿಧ ಗಾತ್ರಗಳಲ್ಲಿ ಇರುತ್ತದೆ. (ಒಂದು ಫ್ರಿಜ್ ಗಾತ್ರದಲ್ಲೂ ಇದೆ) ಇದರಲ್ಲಿ ಅಲ್ಟ್ರಾವೈಲೇಟ್ ರೇಸ್ ಇರುತ್ತದೆ, ಈ ರೇಸ್ ಬಿದ್ದಾಗ ವೈರಸ್ ಕೇವಲ 15 ಸೆಕೆಂಡುಗಳಲ್ಲಿ ಸಾಯುತ್ತದೆ. ಈ ಉತ್ಪನ್ನವನ್ನು ಬಯೋ ಫೀ ಕಂಪನಿಯ ರವಿಕುಮಾರ್ ಅವರು ಸಂಶೋಧಿಸಿ ತಯಾರಿಸಿದ್ದಾರೆ. 2. ಫ್ಲೋರೋಸೆನ್ಸ್ ಪ್ರೋಬ್ಸ್
ಇದು ಕೋವಿಡ್ ಕಿಟ್ ನಲ್ಲಿ ಇರಬಹುದಾದ ಪ್ರಮುಖ ಅಂಗ. ಇದು ಇಲ್ಲದಿದ್ದರೆ ವೈರಸ್ ಅನ್ನು ಪತ್ತೆ ಮಾಡಲು ಸಾಧ್ಯವಿಲ್ಲ. ಆರ್‌ಟಿ-ಪಿಸಿಆರ್ ಪರೀಕ್ಷೆಯಲ್ಲಿ ಫ್ಲೋರೋಸೆನ್ಸ್ ಪ್ರೋಬ್ಸ್ ಅನ್ನು ಬಳಸಲಾಗುತ್ತದೆ. ಇದನ್ನು ವಿಎನ್ ಐಆರ್ ಸಂಸ್ಥೆಯ ಡಾ. ಗೋವಿಂದರಾಜು ಮತ್ತು ಡಾ. ಮೆಹರ್ ಪ್ರಕಾಶ್ ಅಭಿವೃದ್ಧಿಪಡಿಸಿದ್ದಾರೆ. 3. ಭ್ರೂಣ ನಿಗಾ ಯಂತ್ರ (ಫೀಟೆಲ್ ಮಾನಿಟರಿಂಗ್ ಡಿವೈಸ್)
ಕೋವಿಡ್ ಇದ್ದಾಗ ಗರ್ಭಿಣಿಯರು ನೇರವಾಗಿ ವೈದ್ಯರನ್ನು ಭೇಟಿಯಾಗಲು ಸಾಧ್ಯವಿಲ್ಲ. ಪಟ್ಟಿಯಾಕಾರಾದ ಈ ಉಪಕರಣದ ಮೂಲಕ ಭ್ರೂಣದ ಹೃದಯ ಬಡಿತವನ್ನೂ ವೈದ್ಯರು ತಿಳಿಯಬಹುದು. ಗರ್ಭಿಣಿ ಮಹಿಳೆ ಈ ಉಪಕರಣವನ್ನು ತಮ್ಮ ಹೊಟ್ಟೆ ಮೇಲಿಟ್ಟುಕೊಂಡರೆ ವೈದ್ಯರಿಗೆ ಎಲ್ಲ ಮಾಹಿತಿಯೂ ತಿಳಿಯುತ್ತದೆ. ಜೆನಿತ್ರೀ ಕಂಪನಿಯ ಡಾ. ಅರುಣ್ ಅಗರವಾಲ್ ಇದನ್ನು ಸಂಶೋಧಿಸಿ ಅಭಿವೃದ್ಧಿಪಡಿಸಿದ್ದಾರೆ. 4. ವಿಟಿಎಂ (ವೈರಲ್ ಟ್ರಾನ್ಸ್ ಪೋರ್ಟ್ ಮೀಡಿಯಾ)
’ಡೇಕೊಂತೋ’ ಎಂಬ ಹೆಸರಿನ ಈ ಉತ್ಪನ್ನವನ್ನು ಡಿನೋವೋ ಬಯೋಲ್ಯಾಬ್ಸ್ ನ ಐಬಿಎಬಿಯ ಮಂಜುನಾಥ್ ಹಾಗೂ ದಿನೇಶ್ ಅವರು ಸಂಶೋಧಿಸಿ ತಯಾರಿಸಿದ್ದಾರೆ. ಇದು ಸದ್ಯದ ಸ್ಥಿತಿಯಲ್ಲಿ ಅತ್ಯಂತ ಮಹತ್ವದ ಸಂಶೋಧನೆಯಾಗಿದೆ. ಸೋಂಕಿತರಿಂದ ಗಂಟಲು ದ್ರವ ಮತ್ತಿತರೆ ಸ್ಯಾಂಪಲ್ ಗಳನ್ನು ಪಡೆದು ಟಿಸ್ಟಿಂಗ್ ಲ್ಯಾಬಿಗೆ ಕಳಿಸುವ ಪ್ರಕ್ರಿಯೆಯಲ್ಲಿ ಈ ಉಪಕರಣ ಅತ್ಯಗತ್ಯವಾಗಿ ಬೇಕಿತ್ತು. ಏಕೆಂದರೆ, ಇದು ಜೀವಂತ ವೈರಸ್ ಅನ್ನು ಸಾಗಿಸುತ್ತದೆ. ಜೀವಂತ ವೈರಸ್ ಅನ್ನು ಒಂದು ಕಡೆಯಿಂದ ಇನ್ನೊಂದಡೆಗೆ ಸಾಗಿಸುವುದು ಅತ್ಯಂತ ಸವಾಲಿನದ್ದು, ಅಪಾಯಕಾರಿ ಕೂಡ. ಈ ಉಪಕರಣವನ್ನು ವಿದೇಶಗಳಿಂದ ದುಬಾರಿ ಬೆಲೆ ತೆತ್ತು ಆಮದು ಮಾಡಿಕೊಳ್ಳಬೇಕಾಗಿತ್ತು. 5.ಕೋವ್-ಆಸ್ತ್ರ
ಈ ಸಂಶೋಧನೆ ಬಹಳ ವಿಶೇಷವಾಗಿದೆ. ಇದುವರೆಗೂ ನಾವು ಗಂಟಲು ದ್ರವ ಮತ್ತಿತರ ಮಾದರಿಗಳನ್ನು ಪಡೆದು ಕೋವಿಡ್ ಪತ್ತೆ ಮಾಡುತ್ತಿದ್ದೆವು. ಈಗ ಕೋವ್ – ಅಸ್ತ್ರದ ಮೂಲಕ ಕೇವಲ ರೋಗಿಯ ಎದೆಯ ಭಾಗದ ಎಕ್ಸ್ ರೇ ತೆಗೆದು ವೈರಸ್ ಇದೆಯೇ ಇಲ್ಲವೇ ಎಂಬುದನ್ನು ಪತ್ತೆ ಮಾಡಬಹುದಾಗಿದೆ. ಸುಮಾರು 4 ರಿಂದ 5 ಸಾವಿರ ರೂಪಾಯಿ ವೆಚ್ಚವನ್ನು ಕಡಿಮೆ ಮಾಡಿ ಕೇವಲ 150ರಿಂದ 200 ರೂಪಾಯಿ ಎಕ್ಸ್ ರೇ ಯಿಂದ ಸೋಂಕನ್ನು ಪತ್ತೆ ಮಾಡಬಹುದು. ಇದನ್ನು ಅಯಿಂದ್ರ ಕಂಪನಿಯ ಆದರ್ಶ್ ನಟರಾಜನ್ ಅವರು ಇದನ್ನು ಸಂಶೋಧಿಸಿ ಅಭಿವೃದ್ಧಿಪಡಿಸಿದ್ದಾರೆ. 6. ಆಂಟಿ ಮೈಕ್ರೋಬಿಯಲ್ ಫೇಸ್ ವಾಶ್
ಮುಖದ ಮೇಲೆ ಕೂರುವ ಕೋವಿಡ್ ವೈರಸ್ ಜತೆಗೆ ಬೇರೆ ಯಾವುದೇ ವೈರಾಣುವನ್ನು ಸೆಕೆಂಡುಗಳಲ್ಲಿ ನಾಶ ಮಾಡುವ ಫೇಸ್ ವಾಶ್ ಇದಾಗಿದೆ. ಇದನ್ನು ಗಿಡಮೂಲಿಕೆಗಳಿಂದ ತಯಾರಿಸಲಾಗಿದೆ. ಇದನ್ನು ಆಟ್ರಿಮ್ಡ್ ಕಂಪನಿಯ ಡಾ. ಲತಾ ಡ್ಯಾಮಲ್ ಅವರು ಸಂಶೋಧಿಸಿ ಅಭಿವೃದ್ಧಿಪಡಿಸಿದ್ದಾರೆ.