Advertisement

ಭವಿಷ್ಯದಲ್ಲಿ ಕೋವಿಡ್ ನಿಂದ ಎದುರಾಗುವ ಸಮಸ್ಯೆಗಳ ಅಧ್ಯಯನಕ್ಕೆ ಸಮಿತಿ: ಡಾ|ಸುಧಾಕರ್‌

03:11 PM Sep 21, 2020 | sudhir |

ಬೆಂಗಳೂರು : ಕೋವಿಡ್ ವೈರಸ್‌ ಸೋಂಕಿನಿಂದ ಗುಣಮುಖರಾದವರಿಗೆ ಭವಿಷ್ಯದಲ್ಲಿ ಎದುರಾಗಬಹುದಾದ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಲು ತಜ್ಞರ ಸಮಿತಿ ರಚಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ. ಸುಧಾಕರ್‌ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್‌ ಮಾಡಿರುವ ಸಚಿವರು, ಕೊರೊನಾದಿಂದ ಗುಣಮುಖರಾದವರಿಗೆ ಭವಿಷ್ಯದಲ್ಲಿ ಮತ್ತೆ ಸೋಂಕಿನ ಅಪಾಯವಿದೆಯೇ ಎಂಬ ಅನುಮಾನ ಮೂಡಿದೆ. ಈ ನಿಟ್ಟಿನಲ್ಲಿ ಅಧ್ಯಯನದ ಆವಶ್ಯಕತೆ ಇದೆ ಎಂದಿದ್ದಾರೆ.

Advertisement

ಹೀಗಾಗಿ ಲಘು ಮತ್ತು ತೀವ್ರ ರೋಗಲಕ್ಷಣ ಹೊಂದಿರುವ ಮತ್ತು ಇತರ ಗಂಭೀರ ರೋಗಗಳಿಂದ ಬಳಲುತ್ತಿದ್ದವರ ಮೇಲೆ ಆಗಬಹುದಾದ ಪರಿಣಾಮಗಳ ಬಗ್ಗೆ ಅಧ್ಯಯನದಿಂದ ತಿಳಿದುಕೊಳ್ಳಬೇಕಿದೆ. ಇದಕ್ಕಾಗಿ ತಜ್ಞರ ಸಮಿತಿ ರಚಿಸಲಾಗುತ್ತದೆ. ತಜ್ಞರ ಅಧ್ಯಯನದ ವರದಿಯು ಸೂಕ್ತ ಚಿಕಿತ್ಸಾ ಪದ್ಧತಿಗಳನ್ನು ಅಳವಡಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.

ರವಿವಾರ 8,191 ಮಂದಿಗೆ ಸೋಂಕು
ಬೆಂಗಳೂರು: ರಾಜ್ಯದಲ್ಲಿ ಕಳೆದ 10 ದಿನಗಳಲ್ಲಿ 1,086 ಕೊರೊನಾ ಸೋಂಕಿತರು ಸಾವಿಗೀಡಾಗಿದ್ದು, ಈ ಮೂಲಕ ಒಟ್ಟಾರೆ ಸಾವಿನ ಸಂಖ್ಯೆ ಎಂಟು ಸಾವಿರದ ಗಡಿ ದಾಟಿದೆ.

ರವಿವಾರ ಹೊಸದಾಗಿ 8,191 ಮಂದಿಗೆ ಸೋಂಕು ತಗಲಿದ್ದು, 101 ಮಂದಿ ಮೃತಪಟ್ಟಿದ್ದಾರೆ. ಜತೆಗೆ 8,611 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ ರಾಜ್ಯದ ಒಟ್ಟಾರೆ ಸೋಂಕು ಪ್ರಕರಣಗಳು 5,19,537ಕ್ಕೆ, ಗುಣಮುಖರ ಸಂಖ್ಯೆ 4,13,452ಕ್ಕೆ ಹಾಗೂ ಮೃತಪಟ್ಟವರ ಸಂಖ್ಯೆ 8,023ಕ್ಕೆ ಏರಿದೆ. ಸುಮಾರು 98,043 ಮಂದಿ ಚಿಕಿತ್ಸೆಯಲ್ಲಿದ್ದಾರೆ.

ಪ್ರಿಯಾಂಕ್‌ ಖರ್ಗೆಗೆ ಕೋವಿಡ್
ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಶನಿವಾರ ಕೊರೊನಾ ದೃಢಪಟ್ಟಿದೆ. ಈ ಬಗ್ಗೆ ಅವರು ಟ್ವೀಟ್‌ ಮಾಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next