Advertisement

ಕೋವಿಡ್ ಹಿನ್ನೆಲೆ : ಸಿಬಿಎಸ್‌ಇ 10ನೇ ತರಗತಿ ಫ‌ಲಿತಾಂಶ ಮುಂದೂಡಿಕೆ

09:21 PM May 18, 2021 | Team Udayavani |

ನವದೆಹಲಿ: ಸೋಂಕಿನ ಹಿನ್ನೆಲೆಯಲ್ಲಿ 10ನೇ ತರಗತಿ ಫ‌ಲಿತಾಂಶ ಪ್ರಕಟಿಸುವ ದಿನಾಂಕವನ್ನು ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಮುಂದೂಡಿದೆ.

Advertisement

ಈಗಾಗಲೇ ಪರೀಕ್ಷೆಯನ್ನು ರದ್ದು ಮಾಡಿರುವ ಸಿಬಿಎಸ್‌ಇ ಶಾಲೆಗಳಿಗೆ ವಿದ್ಯಾರ್ಥಿಗಳು ಹಿಂದಿನ ಪರೀಕ್ಷೆಗಳಲ್ಲಿ ಮತ್ತು ಇತರ ಅಭ್ಯಾಸ ಪುಸ್ತಕಗಳಲ್ಲಿ ನೀಡಲಾಗಿರುವ ಅಂಕಗಳನ್ನು ಸಮಗ್ರವಾಗಿ ಪರಿಶೀಲನೆ ನಡೆಸಿ, ಸಲ್ಲಿಸಲು ಹೆಚ್ಚಿನ ಸಮಯ ಬೇಕಾಗುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಈ ಹಿಂದೆ ಪ್ರಕಟಿಸಲಾಗಿದ್ದ ನಿರ್ಧಾರದ ಪ್ರಕಾರ ಜೂ.11ರಂದು ಶಾಲೆಗಳು ಅಂಕಗಳನ್ನು ಪರಿಶೀಲಿಸಿ, ಸಲ್ಲಿಸಬೇಕಾಗಿತ್ತು. ಜೂ.20ರಂದು ಫ‌ಲಿತಾಂಶ ಪ್ರಕಟಿಸಲು ತೀರ್ಮಾನಿಸಲಾಗಿತ್ತು. ವಿವಿಧ ರಾಜ್ಯಗಳಲ್ಲಿ ಜಾರಿಯಲ್ಲಿರುವ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಈಗ ಟ್ಯಾಬುಲೇಷನ್‌ ದಿನಾಂಕವನ್ನು ಜೂ.30ರವರೆಗೆ ವಿಸ್ತರಿಸಲಾಗಿದೆ.

ಇದನ್ನೂ ಓದಿ :ಕೋವಿಡ್ ಕಷ್ಟ ಕಾಲದಲ್ಲಿ ಬಂಗಾರವೇ ಜೀವನಾಧಾರ! ಚಿನ್ನ ಅಡ ಇಡುವವರ ಸಂಖ್ಯೆಯಲ್ಲಿ ಭಾರೀ ಹೆಚ್ಚಳ

Advertisement

Udayavani is now on Telegram. Click here to join our channel and stay updated with the latest news.

Next