ಮೈಸೂರು: ಕೋವಿಡ್ ಚಿಕಿತ್ಸೆಗಾಗಿ ಖಾಸಗಿಆಸ್ಪತ್ರೆಗಳಲ್ಲಿ ಹಾಸಿಗೆಗಳಿದ್ದರೂ, ಕೃತಕವಾಗಿಹಾಸಿಗೆ ಅಭಾವ ಸೃಷ್ಟಿಸುವ ಆಸ್ಪತ್ರೆಗಳ ವಿರುದ್ಧಕಠಿಣ ಕ್ರಮ ಜರುಗಿಸಲಾಗುವುದು ಎಂದುಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಎಚ್ಚರಿಕೆನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಭಾನುವಾರ ಖಾಸಗಿ ಆಸ್ಪತ್ರೆಗಳ ಆಡಳಿತಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಸರ್ಕಾರದಮಾರ್ಗಸೂಚಿಯಂತೆ ಖಾಸಗಿ ಆಸ್ಪತ್ರೆಗಳು ಶೇ.50ರಷ್ಟು ಹಾಸಿಗೆಗಳನ್ನು ಮೀಸಲಿಡಬೇಕು.
ಈ ಬಗ್ಗೆಪ್ರತಿದಿನ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕುಎಂದು ಸೂಚಿಸಿದರು.ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಒಳಪಟ್ಟವರಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿಆಸ್ಪತ್ರೆಗಳಲ್ಲಿ ಹಾಸಿಗೆ ಕೊರತೆಯಿಂದಾಗಿ ಸಾಮಾನ್ಯಜನರು ಅಲೆದಾಡುವಂಥ ಪರಿಸ್ಥಿತಿ ನಿರ್ಮಾಣವಾಗಬಾರದು.
ಆಸ್ಪತ್ರೆಗಳಲ್ಲಿ ಖಾಲಿ ಇರುವವೆಂಟಿಲೇಟರ್, ಆಕ್ಸಿಜನ್ ವ್ಯವಸ್ಥೆವುಳ್ಳ ಹಾಸಿಗೆಗಳಮಾಹಿತಿ ಕುರಿತು ಆರೋಗ್ಯ ಮಿತ್ರ ಹಾಗೂಜಿಲ್ಲಾಡಳಿತ ನಿಯೋಜಿಸಿರುವ ನೋಡೆಲ್‌ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದರು.
ಕೋವಿಡ್ ಎರಡನೇ ಅಲೆ ಅತ್ಯಂತ ಪರಿಣಾಮಕಾರಿಯಾಗಿದ್ದು, ಸೋಂಕಿಗೆ ಒಳಪಟ್ಟವರಿಗೆ ಚಿಕಿತ್ಸೆದೊರಕುವುದು ತಡವಾಗಬಾರದು. ಮೈಸೂರುಜಿಲ್ಲೆಯು ಆರೋಗ್ಯ ವ್ಯವಸ್ಥೆಯಲ್ಲಿಉತ್ತಮವಾಗಿದ್ದು, ಯಾವುದೇ ಕಾರಣಕ್ಕೂಸರಿಯಾದ ಚಿಕಿತ್ಸೆ ದೊರಕದೆ ರೋಗಿ ಸಾವನ್ನಪ್ಪಿದಅಪಖ್ಯಾತಿಗೆ ಒಳಗಾಗಬಾರದು.
ಆದ್ದರಿಂದಖಾಸಗಿ ಆಸ್ಪತ್ರೆಗಳು ಜಿಲ್ಲಾಡಳಿತದೊಂದಿಗೆಸಹಕರಿಸಬೇಕು ಎಂದು ಹೇಳಿದರು.ಸಾವು ಸಂಭವಿಸಿದ ದಿನದಂದೇ ಡೆತ್ ಆಡಿಟ್‌ಆಗಬೇಕು. ಆಸ್ಪತ್ರೆಗಳು ಈ ನಿಯಮವನ್ನುಕಡ್ಡಾಯವಾಗಿ ಪಾಲಿಸಬೇಕು. ಯಾವುದೇಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಉಂಟಾಗದಂತೆ ಜಿಲ್ಲಾಡಳಿತ ಕ್ರಮ ವಹಿಸುತ್ತಿದೆ. ಆಕ್ಸಿಜನ್‌ಸಂಬಂದಿಸಿದಂತೆ ಮುಂಚಿತವಾಗಿ ಮಾಹಿತಿನೀಡಬೇಕು. ಆಸ್ಪತ್ರೆಗಳಲ್ಲಿ ದಾಖಾಲಾಗುವರೋಗಿಗಳಿಗೆ ಉತ್ತಮವಾಗಿ ಚಿಕಿತ್ಸೆ ನೀಡಿಗುಣಪಡಿಸಬೇಕು ಎಂದು ತಿಳಿಸಿದರು.