Advertisement

ಕೋವಿಡ್‌ ಭೀತಿ; ಅಗತ್ಯ ಕಟ್ಟೆಚ್ಚರಕ್ಕೆ ಸೂಚನೆ

06:26 PM Mar 02, 2021 | Team Udayavani |

ಯಾದಗಿರಿ: ಮಹಾರಾಷ್ಟ್ರದಲ್ಲಿ ಕೋವಿಡ್‌ -19 ಎರಡನೇ ಅಲೆ ಭೀತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಗತ್ಯ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿ ಕಾರಿ ಡಾ| ರಾಗಪ್ರಿಯ ಆರ್‌. ಅಧಿ ಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಕೋವಿಡ್‌-19 ಟಾಸ್ಕ್ಫೋರ್ಸ್‌ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Advertisement

ಮಹಾರಾಷ್ಟ್ರದಿಂದ ಜಿಲ್ಲೆಗೆ ಬರುವ ಪ್ರಯಾಣಿಕರು, ಸಾರ್ವಜನಿಕರು ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೋವಿಡ್‌-19 ಸೋಂಕು ಹರಡುವಿಕೆ ತಡೆಗಟ್ಟುವುದು
ಮತ್ತು ಕೋವಿಡ್‌ 2ನೇ ಅಲೆ ಮುಂಜಾಗ್ರತಾ ಕ್ರಮ ಕೈಗೊಳ್ಳುವುದು ಅವಶ್ಯಕವಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರ ಸೂಚನೆ ನೀಡಿದೆ.ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಕೋವಿಡ್‌ ಹರಡುವಿಕೆ ತಡೆಗಟ್ಟುವಲ್ಲಿ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕೆಂದು ಹೇಳಿದರು.

ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಕೋವಿಡ್‌ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ಜಿಲ್ಲೆಯ ಪಕ್ಕದ ರಾಜ್ಯವಾದ ಮಹಾರಾಷ್ಟ್ರದಲ್ಲಿ ಕೋವಿಡ್‌ ಎರಡನೇ ಅಲೆ ಪ್ರಾರಂಭವಾಗಿ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದು ತಿಳಿದು ಬಂದಿರುತ್ತದೆ ಎಂದರು.

ಜಿಲ್ಲೆಯ ಗಡಿಭಾಗದಲ್ಲಿ ಸ್ಥಾಪಿಸಲಾದ ಚೆಕ್‌ಪೋಸ್ಟ್‌ಗಳಲ್ಲಿ ಮಹಾರಾಷ್ಟ್ರದಿಂದ ಆಗಮಿಸುವವರು ಕಡ್ಡಾಯವಾಗಿ 72 ಗಂಟೆಗಳ ಮುಂಚೆ ಪಡೆಯಲಾದ ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿ ತೋರಿಸಬೇಕು. ಈ ಬಗ್ಗೆ ಸಾರಿಗೆ ನಿರ್ವಾಹಕರು ಖಚಿತಪಡಿಸಿಕೊಂಡು ಪ್ರಯಾಣಿಸಲು ಅನುಮತಿ ನೀಡಬೇಕು ಎಂದರು.

ಕೋವಿಡ್‌ ಮುನ್ನೆಚ್ಚರಿಕೆ ಕ್ರಮಗಳಾದ ಮಾಸ್ಕ್ ಧರಿಸುವುದು, ದೈಹಿಕ ಅಂತರದ ಪಾಲನೆ ಮತ್ತು ಹ್ಯಾಂಡ್‌ ಸ್ಯಾನಿಟೈಸರ್‌ ಕಡ್ಡಾಯವಾಗಿ ಬಳಕೆ ಮಾಡಿ ಕೊರೊನಾದಿಂದ ಜಾಗೃತಿ ವಹಿಸಬೇಕು ಎಂದರು. ಸಭೆಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶ ಭಾಗವಾನ್‌ ಸೋನಾವಣೆ, ಐಎಎಸ್‌ ಪ್ರೊಬೇಷನರಿ ಆಶ್ವಿ‌ಜಾ, ಅಪರ ಜಿಲ್ಲಾ ಧಿಕಾರಿ ಪ್ರಕಾಶ ರಜಪೂತ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ| ಇಂದುಮತಿ ಕಾಮಶೆಟ್ಟಿ, ಜಿಲ್ಲಾ
ಶಸ್ತ್ರ ಚಿಕಿತ್ಸಕ ಡಾ| ಬಸವಸ್ವಾಮಿ ಹಿರೇಮಠ ಸೇರಿದಂತೆ ಇತರರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next