ಬೆಂಗಳೂರು: ನಗರದಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಹಿನ್ನೆಲೆಯಲ್ಲಿ ಈ ಬಾರಿ ಕರಗ ಉತ್ಸವ ದೇವಸ್ಥಾನಕ್ಕೆ ಸೀಮಿತ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದರು.
ಈ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆಯುಕ್ತರು, ನಗರದಲ್ಲಿ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಅಲ್ಲದೆ, ಶ್ರೀಧರ್ಮರಾಯ ಸ್ವಾಮಿ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದಲ್ಲೂ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಎಲ್ಲರೂ ಈ ಬಾರಿ ಸರಳ ಕರಗ ಆಚರಣೆ ಮಾಡುವುದಕ್ಕೆ ಸಮ್ಮತಿ ನೀಡಿದ್ದಾರೆ ಎಂದರು.
ಇದನ್ನೂ ಓದಿ :ಕೋವಿಡ್ ಆತಂಕ; ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 450 ಅಂಕ ಕುಸಿತ, 14,400ಕ್ಕೆ ಕುಸಿದ ನಿಫ್ಟಿ
ಕರಗ ಆಚರಣೆಯ ವೇಳೆ ಯಾವ ಕ್ರಮ ಅನುಸರಿಸಬೇಕು ಹಾಗೂ ದೇವಸ್ಥಾನದ ಆವರಣಕ್ಕೆ ಸೀಮಿತ ಮಾಡುವ ನಿಟ್ಟಿನಲ್ಲಿ ಹಲವರಿಂದ ಭಿನ್ನ ಅಭಿಪ್ರಾಯ ವ್ಯಕ್ತವಾಗಿದೆ. ಈ ಸಂಬಂಧ ಇನ್ನು ಎರಡು ದಿನದಲ್ಲಿ ಮತ್ತೊಂದು ಸಭೆ ನಡೆಸಿ ಅಂತಿಮ ತೀರ್ಮಾನ ಪ್ರಕಟಿಸಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ಕೋವಿಡ್ ಪ್ರಕರಣ ದಿನ ಕಳೆದಂತೆ ಹೆಚ್ಚಾಗುತ್ತಿದ್ದು, ರಾಜಧಾನಿಯಲ್ಲೇ ಕೋವಿಡ್ ಅಬ್ಬರ ಹೆಚ್ಚಾಗಿದೆ. ಇದರಿಂದ ಮುಂಜಾಗ್ರತ ಕ್ರಮವಾಗಿ ಕರಗ ಉತ್ಸವವನ್ನು ಸರಳವಾಗಿ ಸಂಪ್ರದಾಯ ಬದ್ಧವಾಗಿ ಆಚರಿಸಲು ನಿರ್ಧರಿಸಲಾಗಿದೆ.