ಬೆಂಗಳೂರು: ರಾಜ್ಯದಲ್ಲಿ ಇಂದು ಕೋವಿಡ್ ಪ್ರಕರಣಗಳಲ್ಲಿ ಗಣನೀಯ ಏರಿಕೆಯಾಗಿದ್ದು, ಆತಂಕದ ಸ್ಥಿತಿ ನಿರ್ಮಾಣ ವಾಗಿದೆ. ರಾಜ್ಯದಲ್ಲಿ ಗುರು ವಾರ 8 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ಇಂದು ರಾಜ್ಯದಲ್ಲಿ 25,005 ಹೊಸ ಪ್ರಕರಣಗಳು ದೃಢಪಟ್ಟಿದ್ದು, ಬೆಂಗಳೂರಿನಲ್ಲಿ ಹೊಸ ಪ್ರಕರಣಗಳು 18,374 ಪ್ರಕರಣಗಳು ದಾಖಲಾಗಿವೆ.
ರಾಜ್ಯದಲ್ಲಿ ಪಾಸಿಟಿವಿಟಿ ದರ 12.39% ಗೆ ಏರಿಕೆಯಾಗಿದ್ದು, ಇನ್ನಷ್ಟು ಸವಾಲು ಎದುರಾಗಿದೆ. ಇಂದು 2,363 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 1,15,733 ಸಕ್ರಿಯ ಪ್ರಕರಣಗಳಿದ್ದು, ಬೆಂಗಳೂರಿನಲ್ಲಿ 91 ಸಾವಿರಕ್ಕೊ ಹೆಚ್ಚು ಪ್ರಕರಣಗಳಿವೆ.
ಇಂದು ಸಾವನ್ನಪ್ಪಿದವರ ಪೈಕಿ 03 ಮಂದಿ ಬೆಂಗಳೂರಿನವರಾಗಿದ್ದಾರೆ. ಇಂದು 2,01,704 ಮಂದಿಗೆ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.