Advertisement

ಕೋವಿಡ್‌ ಮಾರ್ಗಸೂಚಿ ಸಡಿಲಿಸಿ ಜಿಲ್ಲಾಧಿಕಾರಿ ಆದೇಶ

08:49 PM Jun 13, 2021 | Team Udayavani |

ಗದಗ: ಕೋವಿಡ್‌-19ರ ಎರಡನೇ ಅಲೆ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಜಾರಿ ಮಾಡಿದ ಕಠಿಣ ಮಾರ್ಗಸೂಚಿಗಳಲ್ಲಿ ಕೆಲವೊಂದಕ್ಕೆ ಸಡಿಲಿಕೆ ನೀಡಿ ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು ಆದೇಶ ಹೊರಡಿಸಿದ್ದಾರೆ.

Advertisement

ಪರಿಷ್ಕೃತ ಮಾರ್ಗಸೂಚಿ ಜೂ.14ರ ಬೆಳಗ್ಗೆ 6 ಗಂಟೆಯಿಂದ ಜೂ. 21ರ ವರೆಗೆ ಜಾರಿಯಲ್ಲಿರುತ್ತವೆ. ಈ ಅವಧಿಯಲ್ಲಿ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆ ವರೆಗೆ ಆರ್ಥಿಕ ಚಟುವಟಿಕೆ ನಡೆಸಲು ಅವಕಾಶ ನೀಡಲಾಗಿದೆ. ಅದೇ ರೀತಿ, ಅಗತ್ಯ ವಸ್ತು, ಮದ್ಯ ಖರೀದಿಗೆ ಮಧ್ಯಾಹ್ನ 2 ಗಂಟೆ ವರೆಗೆ ಅವಕಾಶ ನೀಡಲಾಗಿದೆ. ಶೇ.50 ರಷ್ಟು ಸಿಬ್ಬಂದಿಯೊಂದಿಗೆ ಕೈಗಾರಿಕೆಗಳು ಕಾರ್ಯ ನಿರ್ವಹಿಸಬಹುದು. ಎಲ್ಲಾ ನಿರ್ಮಾಣ ಚಟುವಟಿಕೆಗಳನ್ನು ಆರಂಭಿಸಲು ಅವಕಾಶ ನೀಡಿದ್ದು, ಬೆಳಗ್ಗೆ 5 ರಿಂದ 10 ಗಂಟೆ ವರಗೆ ಪಾರ್ಕ್‌ಗಳನ್ನು ತೆರೆಯಬಹುದು. ಅಂತ್ಯ ಸಂಸ್ಕಾರಕ್ಕೆ 5 ಜನ, ಮದುವೆಗೆ 40 ಜನ ಭಾಗವಹಿಸಲು ಸಮ್ಮತಿ ನೀಡಲಾಗಿದೆ. ಪ್ರತಿದಿನ ಸಂಜೆ 7 ರಿಂದ ಬೆಳಗ್ಗೆ ಬೆಳಗ್ಗೆ 5 ಗಂಟೆ ವರೆಗೆ ನೈಟ್‌ ಕರ್ಫ್ಯೂ ಮತ್ತು ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 5 ಗಂಟೆ ವರೆಗೆ ವೀಕೆಂಡ್‌ ಕರ್ಫ್ಯೂ ಜಾರಿಯಲ್ಲಿರುತ್ತದೆ.

ಪ್ರತಿಬಂಧಕಾಜ್ಞೆ ಜಾರಿ: ಜಿಲ್ಲಾದ್ಯಂತ ಕೋವಿಡ್‌-19 ಹರಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ದಂಡ ಪ್ರಕ್ರಿಯೆ ಸಂಹಿತೆ 1973, ಸಾಂಕ್ರಾಮಿಕ ರೋಗ ಕಾಯ್ದೆ 1897ದಿ ಕರ್ನಾಟಕ ಎಪಿಡಮಿಕ್‌ ಡಿಸೀಸ್‌ ಕೋವಿಡ್‌-19 ರೆಗ್ಯುಲೇಷನ್‌ 2020 ಹಾಗೂ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಿದೆ. ಕೋವಿಡ್‌-19 ಸರಪಳಿಯನ್ನು ತುಂಡಿರಿಸಲು ಆದೇಶದಲ್ಲಿ ಅವಕಾಶ ನೀಡಿದ ಚಟುವಟಿಕೆಗಳಿಗೆ ಮಾತ್ರ ಅನುಮತಿ ನೀಡಿದೆ. ಸೋಂಕು ತಡೆಯುವ ನಿಟ್ಟಿನಲ್ಲಿ ಸರಕಾರದ ಎಲ್ಲ ಸೂಚನೆಗಳನ್ನು ಪಾಲಿಸಬೇಕು. ಮುಖಗವಸು ಧರಿಸದಿದ್ದರೆ ಅಂತಹವರ ವಿರುದ್ಧ ನಗರ ಪಾಲಿಕೆ ಪ್ರದೇಶಗಳಲ್ಲಿ 250 ರೂ. ಮತ್ತು ಇತರೆ ಪ್ರದೇಶಗಳಲ್ಲಿ 100 ರೂ. ದಂಡ ವಿಧಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next