Advertisement

ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಿ

07:11 PM Apr 20, 2021 | Team Udayavani |

ಸುರಪುರ: ಕೊರೊನಾ ನಿಯಂತ್ರಣಕ್ಕೆ ತಾಲೂಕಿನ ಎಲ್ಲ ಅಧಿಕಾರಿಗಳು ಕೈ ಜೋಡಿಸಬೇಕು. ಸರಕಾರ ನೀಡಿರುವ ಕೋವಿಡ್‌ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ತಹಶೀಲ್ದಾರ್‌ ಸುಬ್ಬಣ್ಣ ಜಮಖಂಡಿ ಸೂಚಿಸಿದರು.

Advertisement

ನಗರದ ತಹಶೀಲ್‌ ಕಚೇರಿಯಲ್ಲಿ ಸೋಮವಾರ ಕೊರೊನಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕೊರೊನಾ ಎರಡನೆ ಅಲೆ ವ್ಯಾಪಕವಾಗಿ ಹರಡುತ್ತಿದೆ. ಈ ಕುರಿತು ಯಾವಬ್ಬ ಅಧಿ ಕಾರಿಯೂ ನಿರ್ಲಕ್ಷ ವಹಿಸುವಂತಿಲ್ಲ. ಪಿಡಿಒಗಳು ಗ್ರಾಪಂ ವ್ಯಾಪ್ತಿಯ ಪ್ರತಿ ಗ್ರಾಮಗಳಲ್ಲಿ ಈ ಕುರಿತು ಜಾಗೃತಿ ಮೂಡಿಸಬೇಕು ಎಂದರು.

ಸಿಪಿಐ ಸಾಹೇಬಗೌಡ ಪೊಲೀಸ್‌ ಪಾಟೀಲ್‌ ಮಾತನಾಡಿ, ಗ್ರಾಮೀಣ ಪ್ರದೇಶದ ಜನರಿಗೆ ಕೋವಿಡ್‌ ನಿಯಮಗಳನ್ನು ಪಾಲಿಸಲು ಗ್ರಾಮ ಪಂಚಾಯತ್‌ ಪಿಡಿಒಗಳು, ಆಶಾ ಕಾರ್ಯಕರ್ತೆಯರು ತಿಳಿಸಬೇಕು. ಪ್ರತಿಯೊಬ್ಬರು ಕೋವಿಡ್‌ ನಿಯಮ ಪರಿಪಾಲಿಸುವುದು ಅವಶ್ಯಕವಾಗಿದೆ ಎಂದರು. ನಗರಸಭೆ ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ ಮಾತನಾಡಿದರು. ಗ್ರಾಪಂ ಪಿಡಿಒ ಮತ್ತು ಕಲ್ಯಾಣ ಮಂಟಪದ ಮಾಲೀಕರು ಇದ್ದರು.

ತರಕಾರಿ ಮಾರುಕಟ್ಟೆ ಸ್ಥಳಾಂತರ
ಕೋವಿಡ್‌ ಹಿನ್ನೆಲೆ ತರಕಾರಿ ಮಾರುಕಟ್ಟೆಯನ್ನು ಪ್ರಭು ಕಾಲೇಜು ಮೈದಾನಕ್ಕೆ ಸ್ಥಳಾಂತರಿಸಲಾಗಿದೆ. ನಗರದ ಅನೇಕ ಕಡೆಗಳಲ್ಲಿ ತರಕಾರಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಸಹಕರಿಸಬೇಕು. ಹೊಟೇಲ್‌, ಖಾನಾವಳಿ, ರೆಸ್ಟೋರೆಂಟ್‌ಗಳಲ್ಲಿ ಸ್ಟೀಲ್‌ ಪ್ಲೆಟ್‌, ಗ್ಲಾಸ್‌ಗಳ ಬದಲಾಗಿ ಪೇಪರ್‌ ಗ್ಲಾಸ್‌, ಪ್ಲೇಟ್‌ ಉಪಯೋಗಿಸಬೇಕು. ಇಂದಿನಿಂದ ನಿಯಮ ಪಾಲಿಸದವರಿಗೆ ದಂಡ ವಿಧಿಸಲಾಗುವುದು ಎಂದು ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next