Advertisement

ಅದ್ಧೂರಿ ಹೊಸ ವರ್ಷಾಚರಣೆಗೆ ಜಿಲ್ಲಾಡಳಿತ ನಿರ್ಬಂಧ

05:17 PM Dec 30, 2020 | Team Udayavani |

ದಾವಣಗೆರೆ: ಕೋವಿಡ್‌-19 ಸಾಂಕ್ರಾಮಿಕ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಈ ಬಾರಿಯ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಡಿ.30 ರಿಂದ ಜ. 2 ರವರೆಗೆ ಸಾಮಾಜಿಕಅಂತರವಿಲ್ಲದೆ ಹೆಚ್ಚು ಜನರು ಸೇರುವ ವಿಶೇಷಯೋಜಿತ ಒಟ್ಟುಗೂಡುವಿಕೆ, ಡಿಜೆ, ಡ್ಯಾನ್ಸ್‌ಕಾರ್ಯಕ್ರಮಗಳು, ವಿಶೇಷ ಪಾರ್ಟಿಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ವರ್ಷಾಚರಣೆ ಸಂಬಂಧ ಸರ್ಕಾರ ಕಳೆದಡಿ. 17ರಂದು ಮಾರ್ಗಸೂಚಿ ಹೊರಡಿಸಿದ್ದುಅದರನ್ವಯ ಕೋವಿಡ್‌-19 ಸೋಂಕುತಡೆಗಟ್ಟಲು ಸಾರ್ವಜನಿಕರ ಹಸ್ತಲಾಘವ ಮತ್ತು ಆಲಿಂಗನ ನಿಷೇಧಿಸಲಾಗಿದೆ ಎಂದರು

ಡಿ. 30ರಿಂದ ಜ. 2 ರವರೆಗೆ ಕ್ಲಬ್‌, ಪಬ್‌, ರೆಸ್ಟೋರೆಂಟ್‌ ಹಾಗೂ ಅದೇತೆರನಾದ ಸ್ಥಳ, ಪ್ರದೇಶಗಳಲ್ಲಿ ಸಾಮಾಜಿಕ ಅಂತರವಿಲ್ಲದೆ ಹೆಚ್ಚು ಜನರು ಸೇರುವ ವಿಶೇಷ  ಯೋಜಿತ ಒಟ್ಟುಗೂಡುವಿಕೆ, ಡಿಜೆ, ಡ್ಯಾನ್ಸ್‌ಕಾರ್ಯಕ್ರಮಗಳು, ವಿಶೇಷ ಪಾರ್ಟಿಗಳನ್ನು ನಿಷೇಧಿಸಿದೆ. ಆದರೆ ಕ್ಲಬ್‌, ಪಬ್‌, ರೆಸ್ಟೋರೆಂಟ್‌ಗಳಲ್ಲಿ ಪ್ರತಿನಿತ್ಯದ ಚಟುವಟಿಕೆಗಳಂತೆ ತೆರೆದುನಡೆಸಲು ನಿರ್ಬಂಧ ವಿಧಿಸಿಲ್ಲ. ಹೊಸವರ್ಷಾಚರಣೆ ಸಂಬಂಧ ಸಾರ್ವಜನಿಕ ರಸ್ತೆ,ಮುಖ್ಯ ರಸ್ತೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿಜನರ ಸೇರುವಿಕೆ ಹಾಗೂ ಸಂಭ್ರಮಾಚರಣೆನಿಷೇಧಿಸಲಾಗಿದೆ. ಈ ಸ್ಥಳಗಳಲ್ಲಿ ಪ್ರತಿನಿತ್ಯದಸಾಮಾನ್ಯ ಕಾರ್ಯಚಟುವಟಿಕೆ ಕೈಗೊಳ್ಳಲುನಿರ್ಬಂಧವಿಲ್ಲ. 10 ವರ್ಷದೊಳಗಿನ ಮಕ್ಕಳುಹಾಗೂ 65ವರ್ಷ ಮೇಲ್ಪಟ್ಟ ಹಿರಿಯರುಮನೆಯಲ್ಲಿಯೇ ಇರಬೇಕು. ಸಾರ್ವಜನಿಕಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು. ಹೋಟೆಲ್‌, ಮಾಲ್‌, ಪಬ್‌, ರೆಸ್ಟೋರೆಂಟ್‌ಗಳು ಹಾಗೂಅಂತಹ ಪ್ರದೇಶಗಳಲ್ಲಿ ಥರ್ಮಲ್‌ ಸ್ಕ್ರೀನಿಂಗ್‌ಹಾಗೂ ಸ್ಯಾನಟೈಸರ್‌ ವ್ಯವಸ್ಥೆಯನ್ನು ಕಡ್ಡಾಯ ವಾಗಿ ಮಾಡಬೇಕು. ಸಾಮಾಜಿಕ ಅಂತರದಿಂದ ಜನರು ಸೇರಲು ಜಾಗೃತಿ ವಹಿಸಬೇಕು. ಅಗತ್ಯವಿದ್ದಲ್ಲಿ ಜನರನ್ನು ಸರದಿಯಲ್ಲಿ ಪ್ರವೇಶಿಸಲುಅಥವಾ ಆನ್‌ಲೈನ್‌ ಮೂಲಕ ಅಥವಾ ಟೋಕನ್‌ ಪದ್ಧತಿಯಲ್ಲಿ ಸ್ಥಳ ಕಾಯ್ದಿರಿಸಲು ವ್ಯವಸ್ಥೆ ಕಲ್ಪಿಸಿಕೊಳ್ಳಬೇಕು ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ ಮಾತನಾಡಿ, ಹೊಸ ವರ್ಷ ಆಚರಣೆ ಸಂದರ್ಭದಲ್ಲಿ ಸಾರ್ವಜನಿಕರುಪೊಲೀಸ್‌ ಇಲಾಖೆಯೊಂದಿಗೆ ಸಹಕರಿಸಬೇಕು.ಉಪಹಾರ ಸ್ಥಳಗಳಲ್ಲಿ, ವ್ಯವಸ್ಥಿತ ಕಟ್ಟಡಸಮುತ್ಛಯಗಳಲ್ಲಿ ಜನರು ಕಡ್ಡಾಯವಾಗಿಸಾಮಾಜಿಕ ಅಂತರ ಕಾಯ್ದುಕೊಳ್ಳಲು ವ್ಯವಸ್ಥೆ ಮಾಡಬೇಕು ಎಂದರು.

ಸರ್ಕಾರದ ಮಾರ್ಗಸೂಚಿಯಂತೆ ಹಸಿರುಪಟಾಕಿಗಳನ್ನು ಮಾತ್ರ ಹಚ್ಚಲು ಅವಕಾಶವಿದೆ. ಹೊಸ ವರ್ಷಾಚರಣೆ ಸಂಬಂಧ ಜಿಲ್ಲೆಯಲ್ಲಿ ಅಗತ್ಯ ಪೊಲೀಸ್‌ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಾದ್ಯಂತ ಪೊಲೀಸ್‌ ಇಲಾಖೆ ಮದ್ಯಪಾನಮಾಡಿ ವಾಹನ ಚಾಲನೆ ಮಾಡುವವರ ಬಗ್ಗೆ ತೀವ್ರತಪಾಸಣೆ ನಡೆಸಲು ಕ್ರಮ ಕೈಗೊಂಡಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು. ಹೀಗಾಗಿ ಸಾರ್ವಜನಿಕರುಸರ್ಕಾರದ ಮಾರ್ಗಸೂಚಿ ಪಾಲನೆ ವಿಷಯದಲ್ಲಿಪೊಲೀಸ್‌ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಹೇಳಿದರು.

Advertisement

ಮುಖ್ಯರಸ್ತೆ, ಸಾರ್ವಜನಿಕ ಸ್ಥಳಗಳು, ವಸತಿ ಸಮುಚ್ಛಯ, ಅಪಾರ್ಟ್‌ಮೆಂಟ್‌ಗಳಲ್ಲಿ ಸಂಭ್ರಮಾಚರಣೆಗೆ ಅವಕಾಶವಿಲ್ಲ. ರಾತ್ರಿ 12:30 ಗಂಟೆವರೆಗೆ ಜನರು ತಮ್ಮ ಮನೆ ತಲುಪಲು ಅವಕಾಶ ನೀಡಲಾಗುವುದು. 12:45ರ ಬಳಿಕ ಸಾರ್ವಜನಿಕರ ಅನಗತ್ಯಓಡಾಟಕ್ಕೆ ಅವಕಾಶವಿಲ್ಲ. – ಹನುಮಂತರಾಯ,ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

Advertisement

Udayavani is now on Telegram. Click here to join our channel and stay updated with the latest news.

Next