Advertisement

ಚುನಾವಣೆಗೆ ಕೋವಿಡ್‌ ಮಾರ್ಗಸೂಚಿ

12:22 PM Mar 18, 2021 | Team Udayavani |

ಬೆಳಗಾವಿ: ಕೋವಿಡ್‌ ಹಿನ್ನೆಲೆಯಲ್ಲಿ ಲೋಕಸಭಾ ಉಪ ಚುನಾವಣೆ ಸಂದರ್ಭದಲ್ಲಿ ಪ್ರಚಾರ, ನಾಮಪತ್ರ ಸಲ್ಲಿಕೆ, ಅನುಮತಿ ನೀಡಿಕೆಗೆ ಸಂಬಂಧಿಸಿದಂತೆ ಬಹಳಷ್ಟು ಮಾರ್ಗಸೂಚಿಗಳು ಪರಿಷ್ಕರಣೆಗೊಂಡಿದ್ದು, ಹೊಸ ಮಾರ್ಗಸೂಚಿಯ ಪ್ರಕಾರವೇ ಅನುಮತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು.

Advertisement

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ವಿವಿಧ ಸಮಿತಿಗಳ ನೋಡಲ್‌ ಅಧಿಕಾರಿಗಳ ಸಭೆ ನಡೆಸಿದ ಅವರು, ಮಾದರಿ ನೀತಿ ಸಂಹಿತೆ ಪಾಲನೆಗೆ ಕ್ರಮ ಕೈಗೊಳ್ಳಬೇಕು.ನೀತಿಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಸಾರ್ವನಿಕರಿಂದ ದೂರು ಸ್ವೀಕರಿಸಲು ನಿಯಂತ್ರಣ ಕೊಠಡಿ ಆರಂಭಿಸಬೇಕು ಎಂದು ಸೂಚನೆ ನೀಡಿದರು.

ಕ್ಷೇತ್ರ ವ್ಯಾಪ್ತಿಯ ಎಲ್ಲ ಸಹಾಯಕಚುನಾವಣಾಧಿಕಾರಿಗಳು ಆಯಾ ವಿಧಾನಸಭಾಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದ ಕಾರ್ಯಗಳನ್ನು ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು ಎಂದುಅವರು ಹೇಳಿದರು. ಕೋವಿಡ್‌ ಹಿನ್ನೆಲೆಯಲ್ಲಿ 80 ವರ್ಷ ಮೇಲ್ಪಟ್ಟವರು, ಕೋವಿಡ್‌ ಸೋಂಕಿತರು ಹಾಗೂ ವಿಕಲಚೇತನರಿಗೆಪೋಸ್ಟಲ್‌ ಬ್ಯಾಲೆಟ್‌ ಒದಗಿಸಲು ಚುನಾವಣಾಆಯೋಗದ ಮಾರ್ಗಸೂಚಿ ಪ್ರಕಾರ ಕ್ರಮಕೈಗೊಂಡು ಮತದಾರರ ಪಟ್ಟಿಯಲ್ಲಿಗುರುತು ಮಾಡಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಚುನಾವಣಾಅಕ್ರಮಗಳು ಕಂಡುಬಂದರೆ ಸಂಬಂಧಪಟ್ಟಎಫ್‌.ಎಸ್‌.ಟಿ. ಮತ್ತಿತರ ತಂಡಗಳು ತಕ್ಷಣವೇ ದೂರು ದಾಖಲಿಸಬೇಕು ಎಂದರು.

ಉಪಚುನಾವಣೆ ಹಿನ್ನಲೆಯಲ್ಲಿಮಸ್ಟರಿಂಗ್‌, ಡಿಮಸ್ಟರಿಂಗ್‌, ಮತ ಎಣಿಕೆಸೇರಿದಂತೆ ಎಲ್ಲ ಬಗೆಯ ಸಿದ್ಧತೆಗಳನ್ನು ಈಗಾಗಲೇ ಮಾಡಿಕೊಳ್ಳಲಾಗಿದೆ ಎಂದುಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಮಾಹಿತಿ ನೀಡಿದರು.

Advertisement

ಅಬಕಾರಿ ಇಲಾಖೆಯ ಉಪ ಆಯುಕ್ತರಾದ ಅರುಣಕುಮಾರ್‌ ಮಾತನಾಡಿ, ಈಗಾಗಲೇನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಹಾಗೂಖಾನಾಪುರ ತಾಲೂಕಿನ ಕಣಕುಂಬಿ ಬಳಿಅಬಕಾರಿ ಇಲಾಖೆಯ ವತಿಯಿಂದ ಶಾಶ್ವತ ಚೆಕ್‌ ಪೋಸ್ಟ್‌ ಕಾರ್ಯನಿರ್ವಹಿಸುತ್ತಿದ್ದು,ಉಳಿದಂತೆ ಅಕ್ರಮ ಮದ್ಯ ಮಾರಾಟ ಅಥವಾಸಾಗಾಣಿಕೆ ಮೇಲೂ ನಿಗಾ ವಹಿಸಲಾಗಿದೆಎಂದು ಹೇಳಿದರು.

ಸಭೆಯಲ್ಲಿ ನಗರಪೊಲೀಸ್‌ ಆಯುಕ್ತ ಡಾ.ಕೆ.ತ್ಯಾಗರಾಜನ್‌,ಪೊಲೀಸ್‌ ಉಪ ಆಯುಕ್ತ ಡಾ.ವಿಕ್ರಮ್‌ ಆಮಟೆ, ಮಹಾನಗರ ಪಾಲಿಕೆಯ ಆಯುಕ್ತ ಕೆ.ಎಚ್‌. ಜಗದೀಶ್‌ ಉಪಸ್ಥಿತರಿದ್ದರು

Advertisement

Udayavani is now on Telegram. Click here to join our channel and stay updated with the latest news.

Next