Advertisement

ಉಡುಪಿ ಜಿಲ್ಲೆಯಲ್ಲಿ ಉತ್ಸವ –ಜಾತ್ರೆಗಳು ಧಾರ್ಮಿಕ ಆಚರಣೆಗೆ ಸೀಮಿತ: ಜಿಲ್ಲಾಧಿಕಾರಿ

06:39 PM Mar 30, 2021 | Team Udayavani |

ಉಡುಪಿ: ಕೋವಿಡ್‌ ಮಾರ್ಗಸೂಚಿಯಂತೆ ಜಿಲ್ಲೆಯಲ್ಲಿ ಜಾತ್ರೆ, ಉತ್ಸವಗಳು ಕೇವಲ ಧಾರ್ಮಿಕ ಆಚರಣೆಗೆ ಸೀಮಿತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್‌ ತಿಳಿಸಿದರು.

Advertisement

ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ನಗರದಲ್ಲಿ ಉತ್ಸವ ನಡೆಸಲು ಅನುಮತಿ ನೀಡಲು ಸಾಧ್ಯವಿಲ್ಲ. ಮದುವೆ ಸಮಾರಂಭದಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚು ಜನರು ಸೇರಿದರೆ ಹಾಲ್‌ ಮಾಲಕನ ವಿರುದ್ಧ ಪ್ರಕರಣ ದಾಖಲಿಸಿ, ದಂಡ ಹಾಕಲಾಗುತ್ತದೆ. ಯಕ್ಷಗಾನ, ನಾಟಕ, ಚಲನಚಿತ್ರ ಮಂದಿರದಲ್ಲಿ ಕೋವಿಡ್‌ ಮಾರ್ಗಸೂಚಿ ಅನ್ವಯ ಪ್ರದರ್ಶನ ನಡೆಸಲು ಯಾವುದೇ ನಿರ್ಬಂಧವಿಲ್ಲ ಎಂದರು.

ಕಠಿನ ಕ್ರಮ
ಜಿಲ್ಲೆಯಲ್ಲಿನ ಕೆಲ ಶಿಕ್ಷಣ ಸಂಸ್ಥೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಡಿಡಿಪಿಐ ಹಾಗೂ ಇತರೆ ಶಿಕ್ಷಣಾಧಿಕಾರಿಗಳ ಜತೆಗೆ ಸಭೆ ನಡೆಸಿ, ಶಿಕ್ಷಣ ಸಂಸ್ಥೆಯಲ್ಲಿ ಕೋವಿಡ್‌ ನಿಯಮಾವಳಿ ಪಾಲಿಸುವಂತೆ ಆದೇಶಿಸಲಾಗಿದೆ. ಜತೆಗೆ ಅಧಿಕಾರಿಗಳು ದೀಢಿರ್‌ ಭೇಟಿ ನೀಡಿ ಪರಿಶೀಲನೆ ನಡೆಸಿ, ನಿಯಮ ಉಲ್ಲಂಘಿಸಿದ ಸಂಸ್ಥೆ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ :ರಾಹುಲ್ ಗಾಂಧಿ ಬಳಿ ಹೋದಾಗ ಹುಡುಗಿಯರು ಹುಷಾರಾಗಿರಿ, ಅವರಿಗೆ ಮದುವೆಯಾಗಿಲ್ಲ : ಮಾಜಿ ಸಂಸದ

ಜಿಲ್ಲೆಯಲ್ಲಿ ಎಂಐಟಿ, ಕುಂಜಾರುಗಿರಿ, ಕಾರ್ಕಳ ಹಾಗೂ ಶಂಕರನಾರಾಯಣ ಶಿಕ್ಷಣ ಸಂಸ್ಥೆಯಲ್ಲಿ ಹೆಚ್ಚಿನ ಕೋವಿಡ್‌ ಪ್ರಕರಣಗಳು ದಾಖಲಾಗಿದೆ. ಇಲ್ಲಿ ಕೋವಿಡ್‌ ಮಾರ್ಗಸೂಚಿ ಪಾಲನೆ ಮಾಡದೆ ಇರುವುದು ಕಂಡು ಬರುತ್ತಿದೆ. 10ಕ್ಕಿಂತ ಹೆಚ್ಚು ಪ್ರಕರಣಗಳು ಇರುವ ಸ್ಥಳವನ್ನು ಸೀಲ್‌ ಡೌನ್‌ ಮಾಡಲಾಗುತ್ತಿದೆ. ಜತೆಗೆ ಬಫ‌ರ್‌ಝೋನ್‌ ಪ್ರದೇಶದಲ್ಲಿ ಸಾಧ್ಯವಾದಷ್ಟು ಕೋವಿಡ್‌ ಪರೀಕ್ಷೆಗಳನ್ನು ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.

Advertisement

ಮಣಿಪಾಲದಲ್ಲಿ ಹೆಚ್ಚಿನ ಕೋವಿಡ್‌ ಪ್ರಕರಣಗಳು ಕಂಡು ಬರುತ್ತಿದೆ. ಇಲ್ಲಿ ವ್ಯಾಪಾರ ವಹಿವಾಟು ನಡೆಸುವ ಸಾರ್ವಜನಿಕರು ಎಚ್ಚರದಿಂದ ಇರಬೇಕು. ಹೊರ ರಾಜ್ಯಕ್ಕೆ ಹೊಂದಿಕೊಂಡಿರುವ ಕರ್ನಾಟಕ ಗಡಿ ಜಿಲ್ಲೆಗಳ ಚೆಕ್‌ ಪೋಸ್ಟ್‌ನಲ್ಲಿ ಸಾರ್ವಜನಿಕರ ಕೋವಿಡ್‌ ಪರೀಕ್ಷೆ ವರದಿ ನೆಗೆಟಿವ್‌ ಬಂದರೆ ಮಾತ್ರ ರಾಜ್ಯದೊಳಗೆ ಪ್ರವೇಶ ನೀಡಲಾಗುತ್ತಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next