Advertisement

ಕೋವಿಡ್ ಹೆಚ್ಚಳ : ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿ, ಬೆಂಗಳೂರಿನಲ್ಲಿ 2 ವಾರ ಶಾಲೆ ಬಂದ್

10:44 PM Jan 04, 2022 | Team Udayavani |

ಬೆಂಗಳೂರು : ರಾಜ್ಯದಲ್ಲಿ ರಾಜ್ಯದಲ್ಲಿ ಒಮಿಕ್ರಾನ್ ಹಾಗೂ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು ರಾಜ್ಯದಲ್ಲಿ ಕೋವಿಡ್ ನಿಯಂತ್ರಣಗೊಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ್ದು, ಬೆಂಗಳೂರಿನಲ್ಲಿ 1 ರಿಂದ 9 ನೇ ತರಗತಿ ವರೆಗೆ ಶಾಲೆಗಳಿಗೆ ರಜೆ ನೀಡಲು ನಿರ್ಧರಿಸಿದೆ.

Advertisement

ಮಂಗಳವಾರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸುದೀರ್ಘ ಎರಡೂವರೆ ಗಂಟೆಗಳ ಕಾಲ ನಡೆದ ಸಭೆಯಲ್ಲಿ ಆರೋಗ್ಯ ಸಚಿವ ಕೆ. ಸುಧಾಕರ್, ಆರ್ ಅಶೋಕ್ ಸೇರಿ ಹಲವು ತಜ್ಞರ ಜೊತೆ ನಡೆಸಿದ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸುವ ನಿರ್ಣಯ ಕೈಗೊಂಡು ಬಳಿಕ ಅತೀ ಹೆಚ್ಚು ಕೋವಿಡ್ ಪ್ರಕರಣ ಹೊಂದಿರುವ ಬೆಂಗಳೂರಿನಲ್ಲಿ ಗುರುವಾರದಿಂದ ಜಾರಿಗೆ ಬರುವಂತೆ 1ರಿಂದ 9ನೇ ತರಗತಿವರೆಗೆ ಶಾಲೆಗಳಿಗೆ ರಜೆ ನೀಡಲು ಆದೇಶ ಹೊರಡಿಸಿದ್ದು, 10 ಮತ್ತು 12ನೇ ತರಗತಿಗಳು ಮಾತ್ರ ತೆರೆದಿರಲು ನಿರ್ಧರಿಸಲಾಗಿದೆ. ಆನ್ ಲೈನ್ ತರಗತಿಗಳಲ್ಲಿ ಶೈಕ್ಷಣಿಕ ಚಟುವಟಿಕೆ ಮುಂದುವರೆಯಲಿದೆ.

ಕೋವಿಡ್ ಪ್ರಕರಣಗಳ ಕಡಿವಾಣಕ್ಕೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜೊತೆಗೆ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲು ರಾಜ್ಯ ಸರಕಾರ ಆದೇಶ ನೀಡಿದ್ದು ಶುಕ್ರವಾರ ರಾತ್ರಿ 10 ರಿಂದ ಸೋಮವಾರ ಬೆಳಿಗ್ಗೆ 5ರ ವರೆಗೆ ವೀಕೆಂಡ್ ಕರ್ಫ್ಯೂ ಜನವರಿ 17 ರವರೆಗೆ ಜಾರಿಯಲ್ಲಿರಲಿದೆ.

ಸರ್ಕಾರಿ ಕಚೇರಿ, ಮಾಲ್ ಗಳಲ್ಲಿ ಭಾರತ ಸರ್ಕಾರದ ಮಾರ್ಗಸೂಚಿ ಪಾಲಿಸಲು ನಿರ್ಧರಿಸಲಾಗಿದೆ. ದೇವಸ್ಥಾನ, ಮಾಲ್, ಜಿಮ್, ಸ್ವಿಮ್ಮಿಂಗ್ ಫೂಲ್, ಚಿತ್ರಮಂದಿರ, ಪಬ್, ಬಾರ್ ಎಲ್ಲಾ ಸಾರ್ವಜನಿಕ ಸ್ಥಳಗಲ್ಲಿ ಶೇ.50ರ ಮಿತಿ ಜಾರಿಗೊಳಿಸಲಾಗಿದೆ. ಮದುವೆ ಹೊರಾಂಗಣಕ್ಕೆ 200 ಜನ, ಒಳಾಂಗಣದಲ್ಲಿ 100 ಜನರಿಗೆ ಮಿತಿ, ಹೇರಲಾಗಿದೆ. ಕೋವಿಡ್ ಎರಡು ಡೋಸ್ ಪಡೆದವರಿಗೆ ಮಾತ್ರ ಅವಕಾಶ ನೀಡಲಾಗಿದೆ. ಜಾತ್ರೆ, ಪ್ರತಿಭಟನೆ, ಪಾದಯಾತ್ರೆ ನಡೆಸಲು ಅವಕಾಶವಿಲ್ಲ . ಹೊರ ರಾಜ್ಯಗಳಿಂದ ಬರುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಿದರು.

ನಂತರ ಮಾತನಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಬೆಂಗಳೂರಿನಲ್ಲಿ ಕೊರೋನಾ ಸೋಂಕಿನ ಪ್ರಕರಣ ಹೆಚ್ಚಳದ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಐದು ವಲಯಗಳಾಗಿ ವಿಂಗಡಿಸಿ, ಐಎಎಸ್ ಅಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಿ, ಬೆಡ್, ಆಕ್ಸಿಜನ್ ಸೇರಿದಂತೆ ಕೊರೋನಾ ನಿಯಂತ್ರಣಕ್ಕೆ ಜವಾಬ್ದಾರಿ ವಹಿಸಲು ಸೂಚಿಸಲಾಗಿದೆ. ಕ್ಷೇತ್ರವಾರು ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next