Advertisement
ಸರ್ಕಾರದ ಮಾರ್ಗದರ್ಶಿ ಸೂತ್ರಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಕಣ್ಗಾವಲಿ ಡಲಾಗಿದೆ. ಸಾರ್ವಜನಿಕರು ಅನವಶ್ಯಕವಾಗಿ ಮನೆಯಿಂದ ಹೊರಹೋಗದೆ ಕಡ್ಡಾಯವಾಗಿ ಮಾಸ್ಕ್ ಧರಿಸುವುದರ ಜೊತೆಗೆ ಸಾಮಾಜಿಕ ಅಂತರ ಕಾಪಾಡಿಕೊಂಡು ಸ್ಯಾನಿಟೈಸರ್ ಬಳಸಿ ಕೊರೊನಾ ತಡೆಗಟ್ಟಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜನ ಜಾಗೃತಿ ಕಾರ್ಯಕ್ರಮಗಳನ್ನು ಜಿಲ್ಲಾಡಳಿತ ಕೈಗೊಂಡಿದೆ. ಕೊರೊನಾ ಎರಡನೇ ಅಲೆ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಪರಿಸ್ಥಿತಿಗಳನ್ನು ಎದುರಿಸಲು ಜಿಲ್ಲಾಡಳಿತ ಸನ್ನದ್ದವಾಗಿದ್ದು, ಜಿಲ್ಲಾ ಕೇಂದ್ರದಲ್ಲಿ ಹಾಗೂ ತಾಲೂಕು ಕೇಂದ್ರದ ಆಸ್ಪತ್ರೆಗಳಲ್ಲಿ ಚಿಕಿತ್ಸಾ ವ್ಯವಸ್ಥೆಯನ್ನು ಮಾಡಿಕೊಂಡಿದೆ.
Related Articles
Advertisement
ಜಿಲ್ಲೆಯ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿಯೂ 30 ಹಾಗೂ ಹೊಳೆನರಸೀಪುರ ಮತ್ತು ಅರಸೀಕೆರೆ ತಾಲೂಕು ಆಸ್ಪತ್ರೆಗಳಲ್ಲಿ 50 ಹಾಸಿಗೆಗಳನ್ನು ಕೊರೊನಾ ಸೋಂಕಿತರ ಚಿಕಿತ್ಸೆಗೆ ಮೀಸಲಿರಿಸ ಲಾಗಿದೆ. 5 ಐಸಿಯು ಹಾಸಿಗೆಗಳು, ಹೊಳೆನರಸೀಪುರ ಹಾಗೂ ಅರಸೀಕೆರೆ ಆಸ್ಪತ್ರೆಗಳಲ್ಲಿ 8 ಐಸಿಯು ಹಾಸಿಗೆಗಳ ವ್ಯವಸ್ಥೆ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದವರಿಗೆ ಹಿಮ್ಸ್ ಆಸ್ಪತ್ರೆಗೆ ಕರೆ ತರಲು ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿದೆ.
ಕೊರೊನಾ ಕೇರ್ ಸೆಂಟರ್:
ಜಿಲ್ಲೆಯಲ್ಲಿರುವ ಆಯುಷ್ ಕೇಂದ್ರಗಳನ್ನು ತಾತ್ಕಲಿಕವಾಗಿ ಕೊರೊನಾ ಕೇರ್ ಕೇಂದ್ರಗಳನ್ನಾಗಿ ಪರಿವರ್ತಿಸಲಾಗಿದೆ. ಶೀಘ್ರದಲ್ಲಿ ಇನ್ನೂ 100 ಹಾಸಿಗೆಗಳ ಕೊರೊನಾ ಕೇರ್ ಕೇಂದ್ರ ತೆರೆಯಲು ಯೋಜಿಸಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲೂ ನಿಗದಿತ ಹಾಸಿಗೆಗಳನ್ನು ಕಾಯ್ದಿರಿಸುವಂತೆ ಸೂಚನೆ ನೀಡಲಾಗಿದೆ. ಆದರೆ ಹಿಮ್ಸ್ ಮತ್ತು ತಾಲೂಕು ಸರ್ಕಾರಿ ಆಸ್ಪತ್ರೆಗಳಲ್ಲೇ ಚಿಕಿತ್ಸಾ ವವಸ್ಥೆ ಇರುವುದರಿಂದ ಖಾಸಗಿ ಆಸ್ಪತ್ರೆಗಳತ್ತ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿ ಹೋಗುತ್ತಿಲ್ಲ. ಇತರೆ ರೋಗಿಗಳಿಗೆ ಪ್ರತ್ಯೇಕ ಚಿಕಿತ್ಸಾ ವ್ಯವಸ್ಥೆ: ಸೋಂಕಿತರಿಗೆ ಚಿಕಿತ್ಸೆ ನೀಡಲು ಹಿಮ್ಸ್ ಆಸ್ಪತ್ರೆಯಲ್ಲಿ ಪ್ರತ್ಯೇಕ ಕಟ್ಟಡವನ್ನೇ ಮೀಸಲಿರಿಸಲಾಗಿದ್ದು, ಮತ್ತೂಂದು ಕಟ್ಟಡದಲ್ಲಿ ಹಾಗೂ ಹಳೆ ಕೋರ್ಟ್ ಕಟ್ಟಡದಲ್ಲಿ ಇತರೆ ರೋಗಿಗಳಿಗೆ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲೂ ಕೊರೊನಾ ಸೋಂಕಿತರಿಗೆ ಪ್ರತ್ಯೇಕ ವಾರ್ಡ್ ಮೀಸಲಿರಿಸಿರುವುದರಿಂದ ಇತರೆ ರೋಗಿಗಳ ಚಿಕಿತ್ಸೆಗೆ ತೊಂದರೆಯಾಗುತ್ತಿಲ್ಲ. ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಿ ಪ್ರತ್ಯೇಕ ಕೊಠಡಿಯಲ್ಲಿ ಸೂಕ್ತ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಮನೆಯಲ್ಲಿಯೇ ಪ್ರತ್ಯೇಕವಾಗಿ ಚಿಕಿತ್ಸೆ ಪಡೆಯುತ್ತಿರುವವರನ್ನು ದಿನನಿತ್ಯ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮನೆ, ಮನೆಗಳಿಗೆ ಭೇಟಿ ನೀಡಿ ಆರೊಗ್ಯ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದು ಅವರಿಗೆ ಸಲಹೆ ಸೂಚನೆಗಳನ್ನು ನೀಡುವ ವ್ಯವಸ್ಥೆ ಮಾಡಲಾಗಿದೆ.