Advertisement

ಬಸವರಾಜ ಹೊರಟ್ಟಿಗೆ ಕೋವಿಡ್ ದೃಢ : ಕಿಮ್ಸ್ ಆಸ್ಪತ್ರೆಗೆ ದಾಖಲು

03:37 PM Apr 28, 2021 | Girisha |

ಹುಬ್ಬಳ್ಳಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಮಹಾಮಾರಿ ಕೋವಿಡ್ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ ಹೊರಟ್ಟಿ ಅವರು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದಾರೆ.

Advertisement

ಕಳೆದ ಕೆಲವು ದಿನಗಳಿಂದ ಹೊರಟ್ಟಿ ಅವರಿಗೆ ಕೆಮ್ಮು ಕಾಣಿಸಿಕೊಂಡಿತ್ತು ಎನ್ನಲಾಗಿದೆ. ಇದೇ ಹಿನ್ನೆಲೆಯಲ್ಲಿ  ಇತ್ತಿಚೆಗೆ ಕೋವಿಡ್ ಟೆಸ್ಟ್ ಮಾಡಿಸಿದ್ದರು.

ನಿನ್ನೆ ಸಂಜೆ ಕೋವಿಡ್ ಟೆಸ್ಟ್ ವರದಿ ಬಂದಿದ್ದು, ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿದೆ. ಹೀಗಾಗಿ ವೈದ್ಯರ ಸಲಹೆ ಮೇರೆಗೆ ಅವರು ಕಿಮ್ಸ್​ ಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ :18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ : ಇಂದಿನಿಂದ ನೋಂದಣಿ ಶುರು 

Advertisement

Udayavani is now on Telegram. Click here to join our channel and stay updated with the latest news.

Next