Advertisement

ವಿಜಯಪುರ: ಕೋವಿಡ್ ಭಯದಿಂದ ಸೋಂಕಿತ ಆತ್ಮಹತ್ಯೆ

05:10 PM Jul 16, 2020 | keerthan |

ವಿಜಯಪುರ: ನಗರದ ಜೋರಾಪುರಪೇಟೆ ನಿವಾಸಿ ತಮಗೆ ಕೋವಿಡ್ ಸೋಂಕು ಇರುವುದು ದೃಢಪಟ್ಟ ಮಾಹಿತಿ ತಿಳಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisement

ನಗರದ 57 ವರ್ಷದ ವ್ಯಕ್ತಿ ಮನೆಯಲ್ಲಿ ನೇಣಿಗೆ ಶರಣು ಹಾಕಿಕೊಂಡಿದ್ದಾರೆ. ಅನಾರೋಗ್ಯದ ಕಾರಣದಿಂದ ಮೂರು ದಿನಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್-19 ಸೋಂಕಿನ ಲಕ್ಷಣಗಳು ಕಂಡ ಬಂದ ಹಿನ್ನಲೆಯಲ್ಲಿ ವೈದ್ಯರು ಕೋವಿಡ್ ಆಸ್ಪತ್ರೆಗೆ ತೆರಳಲು ಸೂಚಿಸಿದ್ದರು.

ಕೋವಿಡ್ ಆಸ್ಪತ್ರೆಗೆ ದಾಖಲಾಗುವ ಮುನ್ನ ಮನೆಗೆ ಬಂದ ಸೋಂಕಿತ ಗುರುವಾರ ನಸುಕಿನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ‌ ಮಾಡಿಕೊಂಡಿದ್ದಾರೆ.

ಕೋವಿಡ್-19 ಸೋಂಕು ದೃಢಪಟ್ಟಿದೆ ಎಂಬ ಭಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಕುಟುಂಬದ ಸದಸ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಕುರಿತು ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next