Advertisement

ನೇಣು ಬಿಗಿದುಕೊಂಡು ಕೋವಿಡ್ ಸೋಂಕಿತ ಆತ್ಮಹತ್ಯೆ

09:45 AM May 14, 2021 | Team Udayavani |

ಹಾವೇರಿ : ಕೋವಿಡ್ ಸೊಂಕಿತನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಗರ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ. ಯಲ್ಲಪ್ಪ ಲಮಾಣಿ (70) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

Advertisement

ರಾಣೆಬೇನ್ನೂರು ತಾಲೂಕಿನ ಗಂಗಾಜಲ ತಾಂಡದ ನಿವಾಸಿಯಾಗಿದ್ದು ಮೇ 3ರಂದು ರಾಣೆಬೇನ್ನೂರಿನ ಅಮೃತಂ ಅಸ್ಪತ್ರೆಗೆ ದಾಖಲಾಗಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಮೇ 5 ರಂದು ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯಲ್ಲಪ್ಪ ಲಮಾಣಿ ಇಂದು ಬೆಳಗಿನ ಜಾವ ಕೊಠಡಿಯ ಬಾಗಿಲ ಬಳಿ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಹಾವೇರಿ ಶಹರ ಸಿಪಿಐ ಪ್ರಹ್ಲಾದ್ ಚನ್ನಗಿರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next