Advertisement

ಕೋವಿಡ್ ನಿಯಂತ್ರಣದಲ್ಲಿದೆ, ಗಾಬರಿ ಬೇಡ: ಜನರಿಗೆ ಸಿಎಂ ಬೊಮ್ಮಾಯಿ ಅಭಯ

02:16 AM Jun 07, 2022 | Team Udayavani |

ಹೊಸದಿಲ್ಲಿ/ಬೆಂಗಳೂರು: ರಾಜ್ಯ ದಲ್ಲಿ ಕೊರೊನಾ ಸಂಪೂರ್ಣ ನಿಯಂತ್ರಣ ದಲ್ಲಿದೆ. ಯಾರೂ ಗಾಬರಿಯಾಗುವ ಆವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಯ ನೀಡಿದ್ದಾರೆ.

Advertisement

ಕೆಲವು ದಿನಗಳಿಂದ ಪ್ರಕರಣಗಳ ಸಂಖ್ಯೆ ಯಲ್ಲಿ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿರ್ವಹಣೆಯ ಬಗ್ಗೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಸಭೆ ನಡೆಸಿ ಎಲ್ಲ ಜಿಲ್ಲೆಗಳ ಪರಿಸ್ಥಿತಿಯ ಬಗ್ಗೆ ವರದಿ ಸಲ್ಲಿಸ
ಲಿದ್ದಾರೆ. ಅದರ ಆಧಾರದ ಮೇಲೆ 2-3 ದಿನ ಗಳಲ್ಲಿ ಮುಂದಿನ ಕ್ರಮಗಳ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಪರಿಸ್ಥಿತಿ ನಿಯಂತ್ರಣ ದಲ್ಲಿದ್ದು, ಸರಕಾರ ಎಚ್ಚರ ವಹಿಸಿದೆ ಎಂದು ಸೋಮವಾರ ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಒಂದು ವಾರದಿಂದ ರಾಜ್ಯದಲ್ಲಿ ಕೊರೊನಾ ಪಾಸಿಟಿವ್‌ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆ ಯಲ್ಲಿ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ.

ಇಳಿಮುಖ
ಮೂರು ದಿನಗಳಿಗೆ ಹೋಲಿಸಿದರೆ ಸೋಮ ವಾರ ಕೊರೊನಾ ಪ್ರಕರಣಗಳ ಸಂಖ್ಯೆ ರಾಜ್ಯದಲ್ಲಿ ಮತ್ತು ಬೆಂಗಳೂರಿನಲ್ಲಿ ಇಳಿಮುಖವಾಗಿದೆ.

301ರ ವರೆಗೆ ಹೋಗಿದ್ದ ದೈನಿಕ ಪ್ರಕರಣಗಳ ಸಂಖ್ಯೆ 230ಕ್ಕೆ ಇಳಿದಿದೆ. ಬೆಂಗಳೂರಿನಲ್ಲಿ 291ರಷ್ಟಿದ್ದ ಪ್ರಕರಣಗಳು 222ಕ್ಕೆ ಇಳಿದಿವೆೆ. ಸೋಮವಾರ 230 ಪ್ರಕರಗಳು ದಾಖಲಾಗಿದ್ದು, ಇದರಲ್ಲಿ ಬೆಂಗಳೂರು ನಗರದಲ್ಲಿ 222, ಕೋಲಾರ 3, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ದ.ಕ., ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ ಒಂದು ಪಾಸಿಟಿವ್‌ ವರದಿಯಾಗಿದೆ.

Advertisement

ಮಾಸ್ಕ್ ಕಡ್ಡಾಯ
ಬೆಂಗಳೂರಿನಲ್ಲಿ ಕೊರೊನಾ ಪ್ರಕರಣ ಹೆಚ್ಚಳ ವಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಲು ಬಿಬಿಎಂಪಿ ಚಿಂತನೆ ನಡೆಸಿದೆ. ಜನರಿಗೆ ಮಾಸ್ಕ್ ಧರಿಸುವುದರ ಕುರಿತು ಅರಿವು ಮಾರ್ಷಲ್‌ಗ‌ಳನ್ನು ಬಳಸಿಕೊಳ್ಳಲಾಗುತ್ತಿದೆ. ಆದರೆ ಸದ್ಯ ದಂಡ ವಿಧಿಸದೆ ಇರಲು ತೀರ್ಮಾನಿಸಲಾಗಿದೆ.

ಸಕ್ರಿಯ ಸೋಂಕು ಏರಿಕೆ
ರವಿವಾರದಿಂದ ಸೋಮವಾರದ ವರೆಗಿನ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 4,518 ಹೊಸ ಪ್ರಕರಣಗಳು ದೃಢಪಟ್ಟಿವೆ ಮತ್ತು 9 ಮಂದಿ ಅಸುನೀಗಿದ್ದಾರೆ. ಸಕ್ರಿಯ ಸೋಂಕು ಸಂಖ್ಯೆ 25,782ಕ್ಕೆ ಏರಿದೆ. ಚೇತರಿಸಿ ಕೊಳ್ಳುವವರ ಪ್ರಮಾಣ ಶೇ. 98.73 ಇದೆ.

Advertisement

Udayavani is now on Telegram. Click here to join our channel and stay updated with the latest news.

Next