Advertisement

ಮಂಗಳೂರು: ಶಾಸಕ ವೇದವ್ಯಾಸ ಕಾಮತ್ ಗೆ ಕೋವಿಡ್ ಪಾಸಿಟಿವ್ ದೃಢ

04:56 PM Jun 04, 2021 | Team Udayavani |

ಮಂಗಳೂರು : ಮಂಗಳೂರು ದಕ್ಷಿಣ ಮತ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಗೆ ಕೋವಿಡ್ ಪಾಸಿಟಿವ್ ಸೋಂಕು ದೃಢಪಟ್ಟಿದೆ.

Advertisement

ಈ ಬಗ್ಗೆ ಟ್ವಿಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಅವರು, ‘ನನಗೆ ಸ್ವಲ್ಪ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದೆ. ನನಗೆ ಕೋವಿಡ್ ಧೃಡಪಟ್ಟಿದ್ದು ಪಾಸಿಟಿವ್ ಆಗಿರುತ್ತದೆ. ನಾನು ಹೋಂ ಐಸೋಲೇಷನ್ ಆಗಿದ್ದೇನೆ. ನಾನು ಆರೋಗ್ಯವಾಗಿದ್ದೇನೆ ಎಂದಿದ್ದಾರೆ.

ಇನ್ನು ಸಾರ್ವಜನಿಕರೂ ಕಿವಿ ಮಾತು ಹೇಳಿರುವ ಶಾಸಕರು, ಎಲ್ಲರೂ ಆರೋಗ್ಯದ ಕಡೆ ಗಮನ ಹರಿಸಿ. ಕೋವಿಡ್ ವಿರುದ್ಧದ ಹೋರಾಟದಲ್ಲಿ ಅಂತಿಮ ಗೆಲುವು ನಮ್ಮದೇ ಆಗಲಿದೆ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next