Advertisement

ಕೋವಿಡ್‌: ಖಾಸಗಿ ಆಸ್ಪತ್ರೆಗಳ ಮೇಲೆ ನಿಗಾವಹಿಸಿ

02:55 PM Oct 28, 2020 | Suhan S |

ಮೈಸೂರು: ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ಮೇಲೆ ನಿಗಾವಹಿಸಲು ರಚಿಸಿರುವ ಅಧಿಕಾರಿಗಳ ತಂಡವು ಪ್ರತಿದಿನ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದರು.

Advertisement

ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಮಂಗಳವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಎಎಸ್‌ಐ, ಸೆಸ್ಕ್ ಮತ್ತು ನೋಡೆಲ್‌ ಅಧಿಕಾರಿಗಳು ಸೇರಿದಂತೆ ರಚಿಸಿರುವ ಮೂವರು ಅಧಿಕಾರಿಗಳ ತಂಡವು ಕೋವಿಡ್‌ ಚಿಕಿತ್ಸೆ ಸಂಬಂಧ ಖಾಸಗಿ ಆಸ್ಪತ್ರೆಗಳ ಕಾರ್ಯವೈಖರಿ ಬಗ್ಗೆ ನಿಗಾವಹಿಸಬೇಕು ಎಂದು ಹೇಳಿದರು.

ಸರ್ಕಾರದ ಸೂಚನೆಯಂತೆ ಜಿಲ್ಲೆಯಲ್ಲಿರುವ ಖಾಸಗಿ ಆಸ್ಪತ್ರೆಗಳು ಶೇ.50ರಷ್ಟು ಹಾಸಿಗೆಗಳನ್ನು ಸರ್ಕಾರ ಸೂಚಿಸುವ ಸೋಂಕಿತರಿಗೆ ಮೀಸಲಿಟ್ಟಿವೆ. ಆದ್ದರಿಂದ ಯಾವುದೇ ಕಾರಣಕ್ಕೂ ಹಾಸಿಗೆಗಳ ಕೊರತೆ ಉಂಟಾಗದಂತೆ ಆಸ್ಪತ್ರೆಗೆ ಭೇಟಿ ನೀಡಿ ಹಾಸಿಗೆ ನಿರ್ವಹಣೆಯ ಬಗ್ಗೆ ಮಾಹಿತಿ ಪಡೆಯ ಬೇಕು ಎಂದು ತಿಳಿಸಿದರು.

ಡೆತ್‌ ಆಡಿಟ್‌: ಪ್ರತಿ ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಐಸಿಎಂಆರ್‌ ಸೂಚಿಸುವ ಚಿಕಿತ್ಸಾ ಕ್ರಮವನ್ನು ಅನುಸರಿಸುತ್ತಿರುವ ಬಗ್ಗೆ ಮಾಹಿತಿ ಪಡೆಯಬೇಕು. ಸೋಂಕಿತರು ಯಾವ ಕಾರಣಕ್ಕೆ ಮೃತಪಟ್ಟರು ಎಂಬುದರ ಬಗ್ಗೆ ಡೆತ್‌ ಆಡಿಟ್‌ ಮಾಡವುದನ್ನು ಪರಿಶೀಲಿಸಬೇಕು ಎಂದು ತಿಳಿಸಿದರು.

ಕೋವಿಡ್  ಸೋಂಕು ತಗುಲಿದ ವ್ಯಕ್ತಿಗಳಿಗೆ ಹಾಗೂ ಕುಟುಂಬದವರಿಗೆ ಸಮಸ್ಯೆ ಉಂಟಾಗ ಬಾರದು ಎಂಬ ಸದುದ್ದೇಶದಿಂದ ತಂಡ ರಚಿಸಲಾಗಿದೆ. ಆದ್ದರಿಂದ ತಂಡದ ಅಧಿಕಾರಿಗಳು ಆಸ್ಪತ್ರೆ ಸಿಬ್ಬಂದಿಯೊಡನೆ ಪರಸ್ಪರ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

Advertisement

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಮರನಾಥ್‌, ನೊಡೆಲ್‌ ಅಧಿಕಾರಿಗಳಾದ ಡಾ. ರವಿ, ಡಾ. ಸೀತಾಲಕ್ಷ್ಮೀ, ಡಾ. ಜಗದೀಶ್‌, ರೂಪಶ್ರೀ, ಸೆಸ್ಕ್ ಎಂಜಿ ನಿಯರುಗಳು ಹಾಗೂ ಪೊಲೀಸ್‌ ಸಹಾಯಕ ವೃತ್ತ ನೀರೀಕ್ಷಕರು ಇದ್ದರು.

 

ಹೆಚ್ಚು ಹಣ ಪಡೆದಿದ್ದರೆರೋಗಿಗಳಿಗೆ ವಾಪಸ್‌ ಕೊಡಿಸಿ: ಜಿಲ್ಲಾಧಿಕಾರಿ :  ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗದಿ ಪಡಿಸಿರುವ ದರವನ್ನು ಪಾಲಿಸುತ್ತಿದ್ದಾರೆಯೇ ಎಂಬುದನ್ನು ಸೋಂಕಿತರ ಕುಟುಂಬಸ್ಥರಿಂದ ಮಾಹಿತಿ ಪಡೆಯಬೇಕು. ಸರ್ಕಾರ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚು ದರ ವಿಧಿಸಿದರೆ ಅದನ್ನು ವಾಪಸ್‌ ಕೊಡಿಸುವಂತೆ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದರು.

ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ವಿವಿಧ ಬಗೆಯ ಹಾಸಿಗೆ ಪಟ್ಟಿಯನ್ನು ಪ್ರತಿದಿನ ಆಸ್ಪತ್ರೆಯ ಮುಂಭಾಗ ಪ್ರಕಟಿಸಬೇಕು. ಕೋವಿಡ್‌- 19 ತಗುಲಿ ಆಸ್ಪತ್ರೆಗೆ ದಾಖಲಾಗುವ ಪ್ರತಿಯೊಬ್ಬ ವ್ಯಕ್ತಿಗಳ ಸಂಪೂರ್ಣ ಮಾಹಿತಿಯನ್ನು ಎಸ್‌ 3 ಪೋರ್ಟಲ್‌ನಲ್ಲಿ ದಾಖಲಿಸುವುದನ್ನು ಗಮನಿಸಬೇಕು ಎಂದು ಸೂಚನೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next