Advertisement

ಕೋವಿಡ್ ನಿಯಮ ಉಲ್ಲಂಘನೆ: ಕಳೆದ 2 ದಿನಗಳಲ್ಲಿ 2 ಸಾವಿರಕ್ಕೂ ಅಧಿಕ ಪ್ರಕರಣ

02:46 PM Jul 16, 2020 | mahesh |

ಮುಂಬಯಿ: ನಗರದಲ್ಲಿ ಕೋವಿಡ್ ಹರಡುವುದನ್ನು ತಡೆಯಲು ಆಡಳಿತ ನಿರಂತರ ಪ್ರಯತ್ನ ಮಾಡುತ್ತಿದೆ. ಮತ್ತೂಂದೆಡೆ ಜನರು ಸರಕಾರ ಜಾರಿಗೊಳಿಸಿದ ನಿಯಮಗಳನ್ನು ಉಲ್ಲಂಘಿಸುತ್ತಿದ್ದು, ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.

Advertisement

ಜನರು ಸಾಮಾಜಿಕ ಅಂತರ ಉಲ್ಲಂಘನೆ, ಮಾಸ್ಕ್ ಧರಿಸದಿರುವುದು, ಕರ್ಫ್ಯೂ ಉಲ್ಲಂಘನೆ ಮುಂತಾದ ಅಪರಾಧಗಳಲ್ಲಿ ಮುಂಬಯಿ ಜನತೆ ಮುಂಚೂಣಿಯಲ್ಲಿದ್ದಾರೆ. ಲಾಕ್‌ಡೌನ್‌ ಘೋಷಣೆಯಾದಾಗಿನಿಂದ ಇಲ್ಲಿಯತನಕ ನಿಯಮಗಳನ್ನು ಉಲ್ಲಂ ಸಿದ್ದಕ್ಕಾಗಿ ಸುಮಾರು 32,661 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಲಾಕ್‌ಡೌನ್‌ ಪ್ರಾರಂಭವಾದಾಗಿನಿಂದ ಉಲ್ಲಂ ಸಿದವರ ವಿರುದ್ಧ ಮುಂಬಯಿ ಪೊಲೀಸರು ಕ್ರಮಕೈಗೊಳ್ಳುತ್ತಾ ಬಂದಿದ್ದಾರೆ.
ಪೊಲೀಸರು ಕಳೆದ ಎರಡು ದಿನಗಳಲ್ಲಿ 2 ಸಾವಿರಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ರವಿವಾರ 1,114 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, 327 ಮಂದಿಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಸೋಮವಾರ 1,111 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, 281 ಜನರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಲಾಕ್‌ಡೌನ್‌ ಸಡಿಲಗೊಳಿಸಿದ ಸಂದರ್ಭ ನಿಯಮ ಉಲ್ಲಂಘನೆ ಪ್ರಕರಣ ಕಡಿಮೆಯಾಗಿದ್ದವು. ಆದರೆ ಮತ್ತೆ ಲಾಕ್‌ಡೌನ್‌ ಜಾರಿಗೊಳಿಸಿದ್ದರಿಂದ ಪ್ರಕರಣಗಳ ಸಂಖ್ಯೆ ಹೆಚ್ಚಾಗಿವೆ. ವಾಹನಗಳನ್ನು ಕೇವಲ ಎರಡು ಕಿ.ಮೀ.ಗೆ ಸೀಮಿತಗೊಳಿಸುವ ಆದೇಶವನ್ನು ಪೊಲೀಸರು ಜಾರಿಗೊಳಿಸಿದ್ದು, ವಾಹನ ಚಾಲಕರ ವಿರುದ್ಧ ಕೈಗೊಂಡ ಕ್ರಮಗಳ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗಿತ್ತು. ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಹೊರತಾಗಿಯೂ ಅನೇಕರು ಮುಖವಸ್ತ್ರ ಬಳಸದಿರುವುದು, ಅಂಗಡಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದ್ದಿರುವ ಪ್ರಕರಣಗಳು ಹೆಚ್ಚಾಗಿವೆ. ಇಡೀ ಅವಧಿಯಲ್ಲಿ 11,036 ಜನರಿಗೆ ನೋಟಿಸ್‌ ನೀಡಲಾಗಿದ್ದು, 16,894 ಮಂದಿಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next