Advertisement
ನಗರದ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಕೋವಿಡ್ , ನೆರೆ ಹಾಗೂ ಜಿಲ್ಲೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ಕೋವಿಡ್ ಸಂಬಂಧಿಸಿದಂತೆ ರಿಮ್ಸ್ ಹಾಗೂ ಒಪೆಕ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ ಎಂಬ ದೂರುಗಳಿವೆ. ಕೋವಿಡ್ ಕೇರ್ ಸೆಂಟರ್‌ನಲ್ಲಿ ಮೂರು ದಿನದಿಂದ ವಿದ್ಯುತ್ ಇಲ್ಲ ಎಂದು ವರದಿಯಾಗಿದೆ. ಯಾಕೆ ನಿರ್ಲಕ್ಷ್ಯ ವಹಿಸಿದ್ದೀರಿ ಎಂದು ಕೇಳಿದರು. ಈ ಬಗ್ಗೆ ಸ್ಪಷ್ಟೀಕರಣ ಕೇಳಿದಾಗ ಜೆಸ್ಕಾಂ ಅಧಿಕಾರಿ ಸಭೆಗೆ ಗೈರಾಗಿದ್ದರು. ಕೂಡಲೇ ಅವರಿಗೆ ನೋಟಿಸ್ ನೀಡುವಂತೆ ಸಚಿವ ಸೂಚಿಸಿದರು.
Related Articles
Advertisement
ಸಹಾಯಕ ಆಯುಕ್ತ ಸಂತೋಷ ಕಾಮಗೌಡರ್ ಮಾತನಾಡಿ, ಕೃಷ್ಣಾನದಿ ತೀರದ ಜನರನ್ನು ಸುರಕ್ಷಿತ ಸ್ಥಳಗಳ ಕಳುಹಿಸಲು ವ್ಯವಸ್ಥೆ ಮಾಡಲಾಗಿದೆ. ಕೃಷ್ಣಾ ಹಾಗೂ ತುಂಗಭದ್ರಾ ನದಿ ಪ್ರವಾಹ ಪೀಡಿತ 105 ಗ್ರಾಮಗಳಿಗೆ ಸಂಬಂಧಿಸಿ 32 ಗ್ರಾಪಂಗಳಲ್ಲಿ ವಿಪತ್ತು ನಿರ್ವಹಣ ಸಮಿತಿ ರಚಿಸಲಾಗಿದೆ. ನಾರಾಯಣಪುರ ಜಲಾಶಯದಿಂದ ಸುಮಾರು ಮೂರು ಲಕ್ಷ ಕ್ಯೂಸೆಕ್ ನೀರು ಹರಿಸಿದರೂ ಸಮಸ್ಯೆ ಇಲ್ಲ ಎಂದು ವಿವರಿಸಿದರು.
ಜಂಟಿ ನಿರ್ದೇಶಕ ತರಾಟೆಗೆ: ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡ ಮಾತನಾಡಿ, ಕಷ್ಟಪಟ್ಟು ನಮ್ಮ ತಾಲೂಕಿಗೆ ಅಲೊಕೇಶನ್ ಮಾಡಿಸಿದ್ದ ಯೂರಿಯಾ ಗೊಬ್ಬರವನ್ನು ಬೇರೆಯವರಿಗೆ ಹಂಚಿಕೆ ಮಾಡಲಾಗಿದೆ. ಗೊಬ್ಬರಕ್ಕಾಗಿ ನಾವು ರೌಡಿಸಂ ಮಾಡಬೇಕೆ ಎಂದು ಪ್ರಶ್ನಿಸಿದರು. ಇದಕ್ಕೆ ಮಾನ್ವಿ ಶಾಸಕ, ಕಾಡಾ ಅಧ್ಯಕ್ಷ ಬಸನಗೌಡ ತುರ್ವಿಹಾಳ, ಕೊಪ್ಪಳ ಸಂಸದ ಸಂಗಣ್ಣ ಕರಡಿ ದನಿಗೂಡಿಸಿದರು. ಈ ಕುರಿತು ಕೃಷಿ ಇಲಾಖೆ ಜಂಟಿ ನಿರ್ದೇಶಕ ಹಬೀದ್ ಮಾತನಾಡಿ, ಬೇಡಿಕೆಯಷ್ಟು ಪೂರೈಕೆಯಾಗಿಲ್ಲ ಎಂದರು.
ಇದರಿಂದ ಬೇಸರಗೊಂಡ ಸಚಿವ, ರಸಗೊಬ್ಬರ ಕೊರತೆ ಇರುವ ನನ್ನ ಗಮನಕ್ಕೆ ಯಾಕೆ ತರಲಿಲ್ಲ. ರೈತರಿಗೆ ಯಾವುದೇ ಕಾರಣಕ್ಕೂ ರಸಗೊಬ್ಬರ ಸಮಸ್ಯೆಯಾಗಬಾರದು ಎಂಬುವುದನ್ನು ಆದೇಶಗಳ ಮೂಲಕ ಮಾಹಿತಿ ನೀಡಲಾಗಿದೆ. ಆದರೂ ಈ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ ಎಂದರು. ಸಂಸದ ಅಶೋಕಗಸ್ತಿ, ಜಿಲ್ಲಾ ಕಾರಿ ಆರ್.ವೆಂಕಟೇಶ ಕುಮಾರ, ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ, ಸಿಇಒ ಲಕ್ಷ್ಮೀಕಾಂತರೆಡ್ಡಿ ಸೇರಿ ಇತರರಿದ್ದರು.