Advertisement

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

02:55 AM Dec 26, 2024 | Team Udayavani |

ಬೆಂಗಳೂರು: ಕೋವಿಡ್‌-19 ಸಾಂಕ್ರಾಮಿಕ ಸ್ವರೂಪದಲ್ಲಿದ್ದಾಗ ಎನ್‌-95 ಮಾಸ್ಕ್ ಮತ್ತು ಪಿಪಿಇ ಕಿಟ್‌ ಖರೀದಿಯಲ್ಲಿ ಅವ್ಯವಹಾರ ನಡೆಸಿ ರಾಜ್ಯ ಸರಕಾರದ ಬೊಕ್ಕಸಕ್ಕೆ 167 ಕೋಟಿ ರೂ. ನಷ್ಟ ಉಂಟು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಲಾಜ್‌ ಎಕ್ಸ್‌ಪೋರ್ಟ್ಸ್ ಮತ್ತು ಮುಂಬಯಿಯ ಪ್ರೂಡೆಂಟ್‌ ಮ್ಯಾನೇಜ್‌ಮೆಂಟ್‌ ಸಲ್ಯೂಷನ್ಸ್‌ ವಿರುದ್ಧ ಆತುರದ ಕ್ರಮ ಕೈಗೊಳ್ಳದಂತೆ ರಾಜ್ಯ ಹೈಕೋರ್ಟ್‌ ಆದೇಶಿಸಿದೆ.

Advertisement

ಲಾಜ್‌ ಎಕ್ಸ್‌ಪೋರ್ಟ್ಸ್ ಲಿಮಿಟೆಡ್‌ನ‌ ನಿರ್ದೇಶಕ ಬಿ.ವಿ. ರೆಡ್ಡಿ ಮತ್ತು ಪ್ರೂಡೆಂಟ್‌ ಮ್ಯಾನೇಜ್‌ಮೆಂಟ್‌ ಸಲ್ಯೂಷನ್ಸ್‌ ನಿರ್ದೇಶಕ ವಿ. ಆನಂದ್‌ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಅರ್ಜಿದಾರರನ್ನು ಪ್ರತಿನಿಧಿಸಿದ್ದ ವಕೀಲ ವಿವೇಕ್‌ ಹೊಳ್ಳ ಅವರು ಒಪ್ಪಿಗೆ ಪಡೆಯದೆ ಅರ್ಜಿದಾರರು ವೈದ್ಯಕೀಯ ಸಾಮಗ್ರಿ ಪೂರೈಸಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಆಗ ಪೀಠವು ಅರ್ಜಿದಾರರಿಗೆ ಸದ್ಯಕ್ಕೆ ರಕ್ಷಣೆ ಒದಗಿಸಲಾಗುವುದು. ಈ ವಿಚಾರದಲ್ಲಿ ವಿವರವಾದ ಆದೇಶ ಪ್ರಕಟಿಸಬೇಕಿದೆ. ಇನ್ನು ಪ್ರತಿವಾದಿಗಳ ಪರವಾಗಿ ರಾಜ್ಯ ಸರಕಾರ ನೋಟಿಸ್‌ ಪಡೆಯಬೇಕು. ಅರ್ಜಿದಾರರ ವಿರುದ್ಧ ದುರುದ್ದೇಶಪೂರಿತ ಅಥವಾ ಆತುರದ ಕ್ರಮ ಕೈಗೊಳ್ಳಬಾರದು ಎಂದು ನ್ಯಾಯಾಲಯ ಹೇಳಿದೆ.

ನೋಟಿಸ್‌ ಜಾರಿ
ವೈದ್ಯಕೀಯ ಶಿಕ್ಷಣ ನಿರ್ದೇಶ ನಾಲಯದ ಪ್ರಧಾನ ಲೆಕ್ಕಾಧಿಕಾರಿ ಮತ್ತು ಹಣಕಾಸು ಸಲಹೆಗಾರ ಡಾ| ವಿಷ್ಣು ಪ್ರಸಾದ್‌ ಹಾಗೂ ವೈದ್ಯಕೀಯ ಶಿಕ್ಷಣದ ನಿರ್ದೇಶಕರಿಗೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next