Advertisement

ಬೀದರ ಜಿಲ್ಲೆಯಲ್ಲಿ ಕೋವಿಡ್ ಆರ್ಭಟ..!

08:41 PM Apr 14, 2021 | Team Udayavani |

ಬೀದರ: ಜಿಲ್ಲೆಯಲ್ಲಿ ಕೋವಿಡ್ ಆರ್ಭಟ ಮುಂದುವರೆದಿದೆ. ಬುಧವಾರ ಒಂದೇ ದಿನ 290 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇಬ್ಬರು ಮಹಿಳೆಯರನ್ನು ಬಲಿ ಪಡೆದಿದೆ.

Advertisement

58 ವರ್ಷ ವಯಸ್ಸಿನ ಇಬ್ಬರು ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ. ಇವರು ಕೋವಿಡ್‍ ಸೋಂಕು ಕಾಣಿಸಿಕೊಂಡಿದ್ದರಿಂದ ಏ. 11 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಜಿಲ್ಲೆಯಲ್ಲಿ  ಎರಡನೇ ಬಾರಿ ಅತಿಹೆಚ್ಚು 290 ಕೋವಿಡ್ ಸೋಂಕು ಪ್ರಕರಣಗಳು ದಾಖಲಾಗಿದ್ದು, ಇದರೊಂದಿಗೆ ಪಾಸಿಟಿವ್ ಸಂಖ್ಯೆ 12,134ಕ್ಕೆ ಏರಿಕೆಯಾಗಿದೆ.

ಬುಧವಾರ 121 ಜನ ಸೋಂಕಿತರು ಸೇರಿ ಒಟ್ಟು 9788 ಜನರು ಗುಣಮುಖರಾಗಿದ್ದಾರೆ. ಇನ್ನು 2144 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿದ್ದು, ಒಟ್ಟು 198 ಸೋಂಕಿತರು ಮೃತಪಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next